ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ವರ್ಷ 2600 ಗರ್ಭಪಾತ ಪ್ರಕರಣ ದಾಖಲು; ತನಿಖೆಗೆ ಆದೇಶ

ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 2,600 ಗರ್ಭಪಾತ ಪ್ರಕರಣಗಳು ದಾಖಲಾಗಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು, ತನಿಖೆ ಆದೇಶಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 2,600 ಗರ್ಭಪಾತ ಪ್ರಕರಣಗಳು ದಾಖಲಾಗಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು, ತನಿಖೆ ಆದೇಶಿಸಿದ್ದಾರೆ.

ಗರ್ಭಪಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿದ್ದೇಶ್ವರ ಅವರ ಅಧ್ಯಕ್ಷತೆಯಲ್ಲಿ ದಿಶಾ (ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ) ಸಭೆ ನಡೆದಿದ್ದ, ಸಭೆಯಲ್ಲಿ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಸಮಿತಿಯ ಸದಸ್ಯರಾಗಿರುವ ಜಿಪಿ.ಮುಪ್ಪಣ್ಣ ಅವರು ಈ ವಿಚಾರವನ್ನು ಸಂಸದರ ಗಮನಕ್ಕೆ ತಂದಿದ್ದು, ಬಳಿಕ ಸಂಸದರು, ಈ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. ಸಮಸ್ಯೆಗೆ ಮೂಲ ಕಾರಣ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಅವರು ಮಾತನಾಡಿ, ಏಪ್ರಿಲ್ 2020 ರಿಂದ ಮಾರ್ಚ್ 2021 ರವರೆಗೆ 23,675 ಗರ್ಭಪಾತ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 20,360 ಪ್ರಕರಣಗಳು ಹೆರಿಗೆ ಸಂದರ್ಭದಲ್ಲಿ ಆಗಿದ್ದರೆ, 2,600 ಸ್ವಯಂಪ್ರೇರಿತ ಗರ್ಭಪಾತಗಳಾಗಿವೆ. ಇನ್ನು 715 ಗರ್ಭಿಣಿ ಮಹಿಳೆಯರ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com