ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಭೆಯ ಚಿತ್ರ
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಭೆಯ ಚಿತ್ರ

ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ

ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಹಾಗೂ ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು.

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಹಾಗೂ ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಛ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಚರಂಡಿಯಲ್ಲಿ ನೀರು ಹರಿಯದೆ ಹೊರ ಬಂದು ಸಮಸ್ಯೆಯಾಗಿದೆ. ನಗರೋತ್ಥಾನ ಯೋಜನೆಯಡಿ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆಯಿಂದ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಆದ್ಯತೆ ಕೊಡಲಾಗುವುದು. ಮನೆಗಳಿಗೆ ನೀರು ನುಗ್ಗದಂತೆ ತುರ್ತು ಕ್ರಮಕ್ಕೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಬೆಂಗಳೂರಿಗೆ 4 ಎಸ್​​ಡಿಆರ್​ಎಫ್ ಮೀಸಲಿಡಲು ಆದೇಶ ನೀಡಲಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಬಹುದು. ಯಾವ ಪ್ರದೇಶದಲ್ಲಿ ಹೆಚ್ಚು ಸಮಸ್ಯೆ ಎಂದು ಗುರುತಿಸಿದ್ದೇವೆ. ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಹೆಚ್ಚು ಸಮಸ್ಯೆ ಆಗಿದೆ. ತುರ್ತಾಗಿ ಕ್ರಮ ಕೈಗೊಳ್ಳಲು ಈಗ 64 ರಕ್ಷಣಾ ತಂಡಗಳಿವೆ. ಒಂದೊಂದು ತಂಡದಲ್ಲಿ 14 ಜನ ಇದ್ದು, ಇದನ್ನು 30ಕ್ಕೆ ಏರಿಸಬೇಕು, ಕಂದಾಯ ಇಲಾಖೆಯಿಂದ ಇವರಿಗೆ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು. 
 

Related Stories

No stories found.

Advertisement

X
Kannada Prabha
www.kannadaprabha.com