ಬೆಲೆ ಏರಿಕೆ ವಿರುದ್ಧ ಈ ಹಿಂದೆ ಕಾಂಗ್ರೆಸ್ ನಾಯಕರು ನಡೆಸಿದ್ದ ಪ್ರತಿಭಟನೆಯ ಚಿತ್ರ.
ಬೆಲೆ ಏರಿಕೆ ವಿರುದ್ಧ ಈ ಹಿಂದೆ ಕಾಂಗ್ರೆಸ್ ನಾಯಕರು ನಡೆಸಿದ್ದ ಪ್ರತಿಭಟನೆಯ ಚಿತ್ರ.

ಬೆಲೆ ಏರಿಕೆ ವಿರುದ್ಧ ಆಕ್ರೋಶ: ನ.14ರಿಂದ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಹೋರಾಟ

ನವೆಂಬರ್ 14 ರಿಂದ, ಎಲ್‌ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಪ್ರತಿಭಟನೆಯನ್ನು ಪುನರಾರಂಭಿಸಲಿದೆ.
Published on

ಬೆಂಗಳೂರು: ನವೆಂಬರ್ 14 ರಿಂದ, ಎಲ್‌ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಪ್ರತಿಭಟನೆಯನ್ನು ಪುನರಾರಂಭಿಸಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಿಢೀರ್ ಇಳಿಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಥವಾ ಪ್ರಧಾನಿ ನರೇಂದ್ರ ಮೋದಿ ಹೇಳಿಕೊಳ್ಳುವಂತಹ ‘ದೀಪಾವಳಿ ಉಡುಗೊರೆ’ ಅಲ್ಲ ಎಂದು ಹೇಳಿದ್ದಾರೆ.

ಒಬ್ಬರಿಂದ 40 ರೂಪಾಯಿಗಳನ್ನು ಕಸಿದುಕೊಂಡು ಅವರಿಗೆ 7 ರೂಪಾಯಿಗಳನ್ನು ಹಿಂದಿರುಗಿಸಿದಾಗ, ಅದು ಉಡುಗೊರೆಯಾಗಿ ಬಿಡುತ್ತದೆಯೇ?" ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ "ರಾಜಕಾರಣಿಗಳು ಅಥವಾ ಪ್ರತಿಪಕ್ಷಗಳು ಏನೇ ಮಾಡಿದರೂ ಜನರ ಆದೇಶವೇ ಮುಖ್ಯ" ಎಂದು ಹೇಳಿದ ಅವರು, ಉಪಚುನಾವಣೆ ಫಲಿತಾಂಶಗಳು ರಾಜ್ಯದಲ್ಲಿ ಬಿಜೆಪಿಗೆ ಅದರ ಸ್ಥಾನವನ್ನು ತೋರಿಸಿದೆ ಎಂದು ತಿಳಿಸಿದರು. ಅಲ್ಲದೆ, ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದಿದ್ದಾರೆ.

ಬಳಿಕ ತೈಲ ಬೆಲೆ ಇಳಿಕೆ ಸಾಮಾನ್ಯ ಜನರಿಗೆ ಸಿಕ್ಕ ಗೆಲುವು ಎಂದು ಪ್ರತಿಪಾದಿಸಿದ ಅವರು, ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ನಾವು ಮತದಾರರಲ್ಲಿ ಮನವಿ ಮಾಡಿದ್ದೆವು. ಇದಕ್ಕೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿ. ಪ್ರಜಾಪ್ರಭುತ್ವದಲ್ಲಿ ಮತದಾರರೇ ಆಡಳಿತಗಾರರು ಎಂಬುದನ್ನು ಇದು ತೋರಿಸುತ್ತದೆ. ಆದಾಗ್ಯೂ, ಕಡಿತವನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.

'ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇದರಿಂದ ರಾಜ್ಯಕ್ಕೆ ಯಾವುದೇ ಬಂಡವಾಳ ಹೂಡಿಕೆದಾರರು ಬರುವುದಿಲ್ಲ. ಮುಂದೆ ಉದ್ಯೋಗ ಮತ್ತಷ್ಟು ನಷ್ಟವಾಗುವ ಸಾಧ್ಯತೆ ಇದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು. ಈ ಬಗ್ಗೆ ನ.7 ರಂದು ನಮ್ಮ ನಾಯಕರ ಜತೆ ಚರ್ಚೆ ಮಾಡಿ ಕಾರ್ಯಕ್ರಮದ ವಿವರ ನೀಡುತ್ತೇನೆ' ಎಂದು ಹೇಳಿದರು.

ರಾಜ್ಯಕ್ಕೆ ಒಂದು ದಿನಕ್ಕೆ ಮಾತ್ರ ಸಾಕಾಗುವ ಕಲ್ಲಿದ್ದಲು ಮಾತ್ರ ಪೂರೈಕೆಯಾಗುತ್ತಿದೆ. ರಾಜ್ಯದಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಸದ್ಯಕ್ಕೆ ಹೆಚ್ಚು ಮಳೆ ಇರುವುದರಿಂದ ಪರಿಸರ ಕೈ ಹಿಡಿದಿದೆ. ಕಲ್ಲಿದ್ದಲು ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಗೆ ಸರ್ಕಾರದ ಕಾರ್ಯಸೂಚಿ ಏನು? ಎಂದು ತಿಳಿಸಬೇಕು. ಕಲ್ಲಿದ್ದಲು ಮಂತ್ರಿ ನಮ್ಮವರೇ ಇದ್ದಾರೆ. ಹಿಂದೆ ಹೈಕೋರ್ಟ್ ತೀರ್ಪು ಪ್ರಕಾರ ಕಲ್ಲಿದ್ದಲು ಬಳಸಿಕೊಳ್ಳಲು ಮುಂದಾದಾಗ ನಮ್ಮ ಸರ್ಕಾರಕ್ಕೆ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ, ಅದನ್ನು ತಪ್ಪಿಸಲು ಆಗಿನ ಕೇಂದ್ರ ಸಚಿವರು ಅನುಮತಿ ನೀಡಿರಲಿಲ್ಲ. ಬದಲಿಗೆ ನಮಗೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಈಗ ಅವರದೇ ಸರ್ಕಾರ ಇದೆ ಎಂದು ಅನುಮತಿ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com