

ರಾಮನಗರ: ಬಲಿಪಾಡ್ಯಮಿ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ತಮ್ಮ ಬಿಡದಿ ತೋಟದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ.
ಟ್ವೀಟರ್ ನಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಗೋ ಪೂಜೆ ನೆರವೇರಿಸಿರುವ ಕುಮಾರಸ್ವಾಮಿ, ಇದರ ಮಹತ್ವವನ್ನು ಹಂಚಿಕೊಳ್ಳುವುದರ ಜೊತೆಗೆ ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.
ಭಾಗವತ ಪುರಾಣದ ಪ್ರಕಾರ, ಕಾರ್ತಿಕ ಶುಕ್ಲಾ ಪಾಡ್ಯಮಿ ದಿನ ಶ್ರೀ ಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ ನೆರವೇರಿಸಲಾಯಿತು. ಕೆಲವೆಡೆ ರೈತರು ಇದನ್ನು ಹಟ್ಟಿ ಹಬ್ಬವೆಂದು ಆಚರಿಸುವುದಾಗಿ ತಿಳಿಸಿದ್ದಾರೆ.