ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಸಿಲಿಂಡರ್ ಸ್ಫೋಟ, ಏಳು ಕಾರ್ಮಿಕರಿಗೆ ಸುಟ್ಟ ಗಾಯ
ಬೆಂಗಳೂರು ಹೊರವಲಯ ಆನೇಕಲ್ ತಾಲೂಕ್ ಜಿಗಣಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಏಳು ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ಆನೇಕಲ್ ತಾಲೂಕ್ ಜಿಗಣಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಏಳು ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ.
ಈ ಘಟನೆಯಲ್ಲಿ ಉತ್ತರ ಭಾರತದ ಐವರಿಗೆ ತೀವ್ರ ಗಾಯಗಳಾಗಿದ್ದರೆ, ಇಬ್ಬರು ಸ್ಥಳೀಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಗಳುಗಳಿಗೂ ಏಸ್ ಸುಹಾಸ್ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೀವ್ರ ಗಾಯಗೊಂಡಿರುವ ಐವರು ರೋಗಿಗಳ ಪೈಕಿ ಒಬ್ಬರು 40 ವರ್ಷದ ಪುರುಷರಾಗಿದ್ದು, ಮತ್ತೋಬ್ಬರು 38 ವರ್ಷದ ಮಹಿಳೆಯಾಗಿದ್ದಾರೆ. ಅವರಿಗೆ ಶೇ 50 ರಷ್ಟು ಸುಟ್ಟುಗಾಯಗಳಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಉಳಿದ 21 ವರ್ಷದ ಪುರುಷ ಹಾಗೂ 28 ವರ್ಷದ ಮಹಿಳಾ ರೋಗಿಗೂ ಶೇ 20 ರಿಂದ 25 ರಷ್ಟು ಸುಟ್ಟಗಾಯಗಳಾಗಿದ್ದು, ವಾರ್ಡ್ ನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ