ಬೆಳ್ಳಂಬೆಳಗ್ಗೆ ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ಪೊಲೀಸ್ ದಾಳಿ
ಬೆಂಗಳೂರು: ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಸಿಲಿಕಾನ್ ಸಿಟಿ ಪೊಲೀಸರು (Bengaluru Police) ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದು, ಸುಮಾರು 180 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.
ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ