ಪೇಜಾವರ ಮಠದ ಹಿರಿಯ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ

ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಗಿದೆ. 
ಪೇಜಾವರ ಹಿರಿಯ ಶ್ರೀಗಳಿಗೆ ನೀಡಲಾಗಿರುವ  ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಪಡೆಯುತ್ತಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು
ಪೇಜಾವರ ಹಿರಿಯ ಶ್ರೀಗಳಿಗೆ ನೀಡಲಾಗಿರುವ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಪಡೆಯುತ್ತಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು

ಉಡುಪಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಗಿದೆ. 

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು. 
 
ವಿಶ್ವೇಶ ತೀರ್ಥ ಶ್ರೀಗಳಿಗೆ 2019 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ವಿಶ್ವಪ್ರಸನ್ನ ತೀರ್ಥರು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿವೆ. 

ಪ್ರಶಸ್ತಿ ಸ್ವೀಕರಿಸುವುದಕ್ಕೂ ಮುನ್ನ ಪಾದುಕೆಗಳನ್ನು ವೇದಿಕೆಯಿಂದ ಕೆಳಗೆ ಬಿಟ್ಟಿದ್ದು, ಅನುಕರಣೀಯ ನಡೆ ಎಂದು ಮೆಚ್ಚುಗೆ ವ್ಯಕ್ತವಾಗತೊಡಗಿದೆ. 

2019 ರ ಡಿ.29 ರಂದು ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಗಳು ಇಹಲೋಕ ತ್ಯಜಿಸಿದ್ದರು. ಅಧ್ಯಾತ್ಮ ಕ್ಷೇತ್ರದಲ್ಲಿ ಅವರ ಕೊಡುಗೆ, ಸೇವೆಯನ್ನು ಗೌರವಿಸಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.

ನಾರಾಣಾಚಾರ್ಯ ಹಾಗೂ ಶ್ರೀಮತಿ ಕಮಲಮ್ಮ ಅವರ ಎರಡನೇ ಪುತ್ರನಾಗಿ 1931, ಏಪ್ರಿಲ್ 27 ರಂದು ಜನಿಸಿದ್ದ ವೆಂಕಟರಮಣರಿಗೆ 8 ವರ್ಷದ ಬಾಲ್ಯದಲ್ಲೇ ಸನ್ಯಾಸ ನೀಡಾಲಾಗಿತ್ತು. 1954 ರ ಮೊದಲ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಿದ್ದರು ಈ ಬಳಿಕ 2016 ರ ಜ.18 ರಲ್ಲಿ 5 ನೇ ಬಾರಿಗೆ ಪರ್ಯಾಯ ಪೀಠಾರೋಣ ಮಾಡಿದ್ದು ದಾಖಲೆಯಾಗಿದೆ. 

ಅಸ್ಪೃಶ್ಯತೆ ವಿರುದ್ಧವೂ ವಿಶ್ವೇಶ ತೀರ್ಥರು ಹೋರಾಟ ಮಾಡಿದ್ದರು. 2017 ರಲ್ಲಿ ಉಡುಪಿಯಲ್ಲಿ ಧರ್ಮ ಸಂಸದ್ ನ್ನು ಆಯೋಜಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com