ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಫೋನ್ ಪರಿಶೀಲನೆಗೆ ಮುಂದಾದ ಪೊಲೀಸರು

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಜೆಬಿ ನಗರ ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಈತನಿಗೆ ರೂ.4,500 ದಂಡದ ಜೊತೆಗೆ ಮಂಗಳವಾರ ನ್ಯಾಯಾಲಯ ಜಾಮೀನು ನೀಡಿತ್ತು.

ಶ್ರೀಕಿ ಇತರರೊಂದಿಗೆ ಸೇರಿಕೊಂಡು ಹಣ ಸುಲಿಗೆ ಮಾಡಲು ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುತ್ತಾನೆಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಇದೀಗ ಈತನ ಗೆಳೆಯ ವಿಷ್ಣು ಭಟ್ ನಮ್ಮ ವಶದಲ್ಲಿದ್ದು, ವಿಚಾರಣೆಗೊಳಪಡಿಸಲಾಗಿದೆ. ಇದೀಗ ಶ್ರೀಕಿಯ ಕಳೆದ 2 ವರ್ಷಗಳ ಫೋನ್ ಕಾಲ್ ರೆಕಾರ್ಡ್ ಹಾಗೂ ಆತನ ಟ್ರಾವೆಲ್ ಹಿಸ್ಟರಿಯನ್ನು ತೆಗೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com