ನವೆಂಬರ್ 28 ರಂದು ಸುಪ್ರಸಿದ್ಧ ಕಡಲೆಕಾಯಿ ಪರಿಷೆ: 2 ವರ್ಷಗಳ ನಂತರ ಆಯೋಜನೆ

ನಗರದ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ನವೆಂಬರ್ 28ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ನವೆಂಬರ್ 28ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ.

ಎರಡು ವರ್ಷಗಳ ನಂತರ ಕಡಲೆಕಾಯಿ ಪರಿಷೆ ನಡೆಸಲಾಗುತ್ತಿದ್ದು ಕೋವಿಡ್ ಮಾರ್ಗಸೂಚಿ ಅನ್ವಯ ಪರಿಷೆ ನಡೆಸಲು ಸೂಚನೆ ನೀಡಲಾಗಿದೆ. ಹೆಚ್ಚುವರಿ ಇನ್ನೂ ಯಾವುದೇ ನಿಯಮ ಹೇರುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.  ಇಲ್ಲಿಯವರೆಗೆ ಯಾವುದೇ ಅನುಮತಿ ನೀಡಿಲ್ಲ. ಸಂಘಟಕರು ಪ್ರಸ್ತಾವನೆಯನ್ನು ಸಲ್ಲಿಸಿದ ನಂತರ, ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸಾಂಪ್ರದಾಯಿಕವಾಗಿ ಪರಿಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಬಸವನಗುಡಿ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣೇಶ ದೇವಾಲಯದಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ ನಡೆಯುತ್ತದೆ.

ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಮಾತನಾಡಿ, ಕಡ್ಲೆಕಾಯಿ ಮಾತ್ರವಲ್ಲ, ಅವರೇಕಾಯಿ ಮೇಳಗಳೂ ನಡೆದಿಲ್ಲ. ಈ ಮೇಳದಲ್ಲಿ ಹೆಚ್ಚಿನ ಜನರು ಆಗಮಿಸುವ  ನಿರೀಕ್ಷೆ ಇರುವುದರಿಂದ , ಬಿಬಿಎಂಪಿ ಅಥವಾ ಸರ್ಕಾರಿ ಮೈದಾನದಲ್ಲಿ ಉತ್ಸವವನ್ನು ನಡೆಸುವ ಯೋಜನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com