ಲಸಿಕೆ ಕುರಿತು ಅರಿವಿನ ಕೊರತೆ: ಮಕ್ಕಳಲ್ಲಿ ಹೆಚ್ಚುತ್ತಿರುವ ನ್ಯುಮೋನಿಯಾ, ಆತಂಕ ಸೃಷ್ಟಿ

ಲಸಿಕೆ ಕುರಿತು ಪೋಷಕರಲ್ಲಿ ಅರಿವಿನ ಕೊರತೆಗಳಿದ್ದು, ಇದರಿಂದಾಗಿ 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಲಸಿಕೆ ಕುರಿತು ಪೋಷಕರಲ್ಲಿ ಅರಿವಿನ ಕೊರತೆಗಳಿದ್ದು, ಇದರಿಂದಾಗಿ 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಿಸಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಮಕ್ಕಳನ್ನು ಉತ್ತಮವಾಗಿ ರಕ್ಷಣೆ ಮಾಡುವ ಕುರಿತು ನವೀನ ಲಸಿಕೆ ತಂತ್ರಗಳ ಬಗ್ಗೆ ಚರ್ಚಿಸುತ್ತಿದ್ದರೆ, ಶುಕ್ರವಾರ ಬಿಬಿಎಪಿ ವಿಶೇಷ ಆಯುಕ್ತ (ಆರೋಗ್ಯ) ಬೆಂಗಳೂರಿನಲ್ಲಿ ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆ ಕಾರ್ಯಕ್ರಮಕ್ಕೆ (ಪಿಸಿವಿ) ಚಾಲನೆ ನೀಡಿದರು.

ಈ ಲಸಿಕೆಯು ನ್ಯುಮೋನಿಯಾ, ಮೆನಿಂಜೈಟಿಸ್ ಮತ್ತು ನ್ಯುಮೋಕೊಕಸ್‌ನಿಂದ ಉಂಟಾಗುವ ಇತರ ಗಂಭೀರ ಬ್ಯಾಕ್ಟೀರಿಯಾದ ಸೋಂಕುಗಳು ತಗುಲದಂತೆ ತಡೆಗಟ್ಟಬಹುದು ಎಂದು ಹೇಳಿದ್ದಾರೆ.

ಪ್ರತೀ ವರ್ಷ ನಗರದಲ್ಲಿ 1.2 ಲಕ್ಶ ಜನನಗಳು ವರದಿಯಾಗುತ್ತಿವೆ. ಮಕ್ಕಳಲ್ಲಿ ನ್ಯೂಮೋನಿಯಾ ಮತ್ತು ಮೆದುಳಿನ ಜ್ವರವನ್ನು ತಡೆಯುವ ಉದ್ದೇಶದಿಂದ ಲಸಿಕೆ ವಿತರಿಸಲಾಗುತ್ತಿದೆ. ನಗರದ ಪ್ರದೇಶಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಇದೇ ಲಸಿಕೆಗಾಗಿ ಹಣವಂತರು, ಗಣ್ಯರು ಸಾವಿರಾರು ರುಪಾಯಿ ಪಾವತಿಸುತ್ತಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಲಸಿಕೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವುದು ಲಸಿಕೆ ವಿತರಣೆ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಚಿಕ್ಕ ಮಕ್ಕಳು, ಹಿರಿಯ ನಾಗರೀಕರು ಮತ್ತು ಅಪೌಷ್ಠಿಕತೆಯಿಂದ ಬಳಲುತ್ತಿರುವವರು ಈ ಲಸಿಕೆ ಪಡೆಯಬಹುದು. ಈ ಹಿನ್ನೆಲೆಯಲ್ಲಿ ನ್ಯಾಮೋಕೊಕಲ್ ಕಾಂಜುಗೇಟ್ ಲಸಿಕಾಕರಣಕ್ಕೆ ವ್ಯಾಪಕ ಪ್ರಚಾರ ನೀಡಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com