ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸ್ವತಂತ್ರ ಹೋರಾಟದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟುವಲ್ಲಿ ಜವಾಹರ್ ಲಾಲ್ ನೆಹರೂ ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ 132 ನೇ ವರ್ಷದ  ಜನ್ಮದಿನಾಚರಣೆ ಅಂಗವಾಗಿ ನೆಹರು ಪುತ್ತಳಿಗೆ ಮಾಲಾರ್ಪಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ 132 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ನೆಹರು ಪುತ್ತಳಿಗೆ ಮಾಲಾರ್ಪಣೆ ಮಾಡಿದರು.
Updated on

ಬೆಂಗಳೂರು: ಸ್ವತಂತ್ರ ಹೋರಾಟದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟುವಲ್ಲಿ ಜವಾಹರ್ ಲಾಲ್ ನೆಹರೂ ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ 132 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಮೆಗೆ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೊದಲನೇ ಪ್ರಧಾನಮಂತ್ರಿಯಾಗಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತರುವ ಮುಖಾಂತರ ಭಾರತ ಸ್ವಾತಂತ್ರ್ಯದ ನಂತರದ ತನ್ನ ಗುರಿಗಳನ್ನು ಮುಟ್ಟಲು ಭದ್ರ ಅಡಿಪಾಯ ಹಾಕಿದ ಒಬ್ಬ ಶ್ರೇಷ್ಠ ನಾಯಕ. 

ವಿಶೇಷವಾಗಿ ಭಾರತವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿಯೂ ಅವರ ಪಾತ್ರ ಮಹತ್ವದ್ದು ಎಂದರು. ಮಕ್ಕಳ ಮೇಲಿನ ಅವರ ವಿಶೇಷ ಪ್ರೀತಿಯಿಂದಾಗಿ ಚಾಚಾ ನೆಹರೂ ಎಂಬ ಬಿರಿದು ಬಂದಿದೆ. ಅವರ ಹೆಸರಿನ ಹಲವಾರು ಸಂಸ್ಥೆಗಳು ಭಾರತದ ಉನ್ನತೀಕರಣಕ್ಕೆ ಕಾರಣವಾಗಿದ್ದು, ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವುದು ಗಮನಾರ್ಹ ಎಂದರು. ಅವರಿಗೆ ನಮನ ಸಲ್ಲಿಸುವ ಮೂಲಕ ಮತ್ತೊಮ್ಮೆ ದೇಶ ಕಟ್ಟುವ ಕಾರ್ಯಕ್ಕೆ ನಮ್ಮನ್ನು ಸಜ್ಜುಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com