ವಿಶ್ವ ಮಧುಮೇಹ ದಿನ: 722 ಮಂದಿಯ ಪರೀಕ್ಷೆ ನಡೆಸಿದ ಬಿಬಿಎಂಪಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಭಾನುವಾರ 700 ಕ್ಕೂ ಹೆಚ್ಚು ಜನರಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣೆ ನಡೆಸಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಭಾನುವಾರ 700 ಕ್ಕೂ ಹೆಚ್ಚು ಜನರಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣೆ ನಡೆಸಿತು.

ವಿಶ್ವ ಮಧುಮೇಹ ದಿನದ ಅಂಗವಾಗಿ ಬೆಂಗಳೂರು ಪೂರ್ವ ಮತ್ತು ದಕ್ಷಿಣದ ವಿವಿಧ ಸ್ಥಳಗಳಲ್ಲಿ ಉಚಿತ ತಪಾಸಣಾ ಶಿಬಿರಗಳನ್ನು ನಡೆಸಲಾಗಿದ್ದು, ಶಿಭಿರಗಳಲ್ಲಿ 722 ಮಂದಿಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಪರೀಕ್ಷೆಗಳನ್ನು ನಡೆಸಲಾಯಿತು.

ಬೆಂಗಳೂರು ದಕ್ಷಿಣದ ಲಾಲ್‌ಬಾಗ್, ಸಿದ್ದಾಪುರ ಮತ್ತು ವಸಂತನಗರದಲ್ಲಿ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರು ಪೂರ್ವದಲ್ಲಿ, ಕಬ್ಬನ್ ಪಾರ್ಕ್ ಸುತ್ತಲೂ ನಾಲ್ಕು ಶಿಬಿರಗಳನ್ನು ಸ್ಥಾಪಿಸಲಾಯಿತು.

ಶಿಬಿರಗಳಲ್ಲಿ ಪರೀಕ್ಷೆಗೊಗಾದ ಒಟ್ಟು 722 ಜನರ ಪೈಕಿ ಬೆಂಗಳೂರು ದಕ್ಷಿಣದಲ್ಲಿ 465 ಮತ್ತು ಬೆಂಗಳೂರು ಪೂರ್ವದಲ್ಲಿ 257 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಜಾಗೃತಿಯ ದೃಷ್ಟಿಯಿಂದ ಈ ಪರೀಕ್ಷೆಗಳನ್ನು ನಡೆಸಲಾಗಿದೆ. ತಪಾಸಣೆ ವೇಳೆ 161 ಜನರಿಗೆ ಮಧುಮೇಹ ಇರುವುದು ಪತ್ತೆಯಾಗಿದ್ದು, 90 ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. 135 ಮಂದಿಯಲ್ಲಿ ಅಧಿಕ ರಕ್ತದೊತ್ತಡದ ಪತ್ತೆಯಾಗಿದ್ದು, 27 ಮಂದಿಯಲ್ಲಿ ಹೊಸದಾಗಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧುಮೇಹ ಮತ್ತು ಅಧಿಕ ರಕ್ತದೊತ್ತಡವು ಸಾಮಾನ್ಯವಾಗಿ ಪರಸ್ಪರ ಸಂಬಂಧ ಹೊಂದಿದೆ, ಎರಡನೆಯದು ಮಧುಮೇಹದಿಂದ ಬಳಲುತ್ತಿರುವ ಜನರಲ್ಲಿ ಹೆಚ್ಚು ಪ್ರಚಲಿತವಾಗಿದೆ. ಎರಡೂ ರೋಗಗಳೂ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ವಿಶ್ವದಾದ್ಯಂತ ಮಧುಮೇಹ ಹೆಚ್ಚಾಗುತ್ತಿದ್ದು, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com