ಹಂಸಲೇಖ
ಹಂಸಲೇಖ

ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು

ಪೇಜಾವರ ಶ್ರೀಗಳ ಬಗ್ಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ನಗರದ ನಿವಾಸಿ ಕೃಷ್ಣ ರಾಜ ಎಂಬುವವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಂಸಲೇಖ ಅವರ ಹೇಳಿಕೆಯಿಂದ ತಮ್ಮ ನಂಬಿಕೆಗೆ ಘಾಸಿಯಾಗಿದೆ ಎಂದು ಆರೋಪಿಸಿದ್ದಾರೆ. 

ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಸ್ವಾಮೀಜಿಗಳು ಕೈಗೊಂಡ ಕಾರ್ಯದ ಬಗ್ಗೆ ಹಂಸಲೇಖ ಅವರು ಲೇವಡಿಯಾಗಿ ಮಾತನಾಡಿ, ತಮ್ಮ ಆರಾಧ್ಯ ದೈವ ಬಿಳಿಗಿರಿ ರಂಗಸ್ವಾಮಿ ದೇವರ ಬಗೆಗಿನ ಜನಪದೀಯ ಕಥೆಯನ್ನೂ ಹಂಸಲೇಖ ತುಚ್ಛವಾಗಿ ಪರಿಗಣಿಸಿದ್ದಾರೆ. ಇದರಿಂದಾಗಿ ನಮ್ಮ ಧಾರ್ಮಿಕ ನಂಬಿಕೆ ಹಾಗೂ ಆಸ್ತಿಕ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟಾಗಿದ್ದು ಇದರಿಂದ ಆಗಿರುವ ತೊಂದರೆಗೆ ಹಂಸಲೇಖ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ. ಹನುಮಂತನಗರ ಪಿಎಸ್ ಐ ದೂರನ್ನು ದಾಖಲಿಸಿಕೊಂಡಿದ್ದಾರೆ. 

ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಹಂಸಲೇಖ, ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..' ಎಂದು ಹೇಳಿದ್ದರು.

Related Stories

No stories found.

Advertisement

X
Kannada Prabha
www.kannadaprabha.com