ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ಮುಂದೂಡಿಕೆ

 ವಿದ್ಯಾರ್ಥಿ ಸಂಘಟನೆ ಮತ್ತು ಪೋಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ವಿದ್ಯಾರ್ಥಿ ಸಂಘಟನೆ ಮತ್ತು ಪೋಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ.

ನವೆಂಬರ್ 29 ರಿಂದ  ರಾಜ್ಯದಲ್ಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ  ದಿನಾಂಕ ನಿಗದಿಪಡಿಸಿತ್ತು. ಆದರ, ಇದೀಗ ಈ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಹೊಸ ದಿನಾಂಕ ಪ್ರಕಟಿಸಿದೆ. ಅದರಂತೆ ಡಿಸೆಂಬರ್  9 ರಿಂದ   ಡಿಸೆಂಬರ್ 23 ರ ನಡುವೆ ಮಧ್ಯಂತರ ಪರೀಕ್ಷೆಗಳು ನಡೆಯಲಿವೆ.

ರಾಜ್ಯಾದ್ಯಂತ ನಿಯೋಜಿತ ಕೇಂದ್ರಗಳು ಪರೀಕ್ಷೆ ನಡೆಯಲಿದೆ. ಕೋವಿಡ್ ನಡುವೆ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಲು ಹಾಗೂ ಶಿಕ್ಷಕರು ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com