ಧಾರವಾಡ: ಲೋಚನೇಶ್ವರ ಮಠದ ಶ್ರೀ ರಾಚೋಟೇಶ್ವರ ಶ್ರೀಗಳು ಲಿಂಗೈಕ್ಯ; ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಶ್ರೀ ಲೋಚನೇಶ್ವರ ಮಠದ ರಾಚೋಟೇಶ್ವರ ಮಹಾಸ್ವಾಮಿ ಗುರುವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.
ರಾಚೋಟೇಶ್ವರ ಶ್ರೀಗಳು(ಸಂಗ್ರಹ ಚಿತ್ರ)
ರಾಚೋಟೇಶ್ವರ ಶ್ರೀಗಳು(ಸಂಗ್ರಹ ಚಿತ್ರ)
Updated on: 

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಶ್ರೀ ಲೋಚನೇಶ್ವರ ಮಠದ ರಾಚೋಟೇಶ್ವರ ಮಹಾಸ್ವಾಮಿ ಗುರುವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.

ಇವರು ಕಮಡೊಳ್ಳಿಯ ಲೋಚನೇಶ್ವರ ಮಠದ 5ನೇ ಪೀಠಾಧಿಪತಿಪತಿಯಾಗಿದ್ದು ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ ಸ್ವಾಮೀಜಿಗಳ ಪೀಠಾರೋಹಣ ಆಗಿತ್ತು. ಲೋಚನೇಶ್ವರ ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಸ್ವಾಮೀಜಿ ಭೂದಾನ ಮಾಡಿ ಶಿಕ್ಷಣ ಪ್ರೇಮ ತೋರಿದ್ದರು.

ರಾಚೋಟೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಸಿಎಂ ಬೊಮ್ಮಾಯಿ ಸೇರಿದಂತೆ ಕೆಲವು ನಾಯಕರು ಸಂತಾಪ ಸೂಚಿಸಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಗ್ರಾಮ ಕಮಡೊಳ್ಳಿಯ ಸ್ವಾಮೀಜಿ ಇವರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com