ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾಜಿ ಕಾರ್ಪೋರೇಟರ್ ಶಿವಪ್ಪ ಆತ್ಮಹತ್ಯೆಗೆ ಶರಣು

55 ವರ್ಷದ ಶಿವಪ್ಪ ಆತ್ಮಹತ್ಯೆ ಶರಣಾದ ಮಾಜಿ ಕಾರ್ಪೊರೇಟರ್ ಆಗಿದ್ದಾರೆ. ಅತ್ತಿಗುಪ್ಪೆಯ ನಿವಾಸದಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಶಿವಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.
Published on

ಬೆಂಗಳೂರು: ಮಾಜಿ ಕಾರ್ಪೊರೇಟರ್ ಆತ್ಮಹತ್ಯೆಗೆ  ಶರಣಾಗಿರುವ ಘಟನೆ  ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ನಡೆದಿದೆ.

55 ವರ್ಷದ ಶಿವಪ್ಪ ಆತ್ಮಹತ್ಯೆ ಶರಣಾದ ಮಾಜಿ ಕಾರ್ಪೊರೇಟರ್ ಆಗಿದ್ದಾರೆ. ಅತ್ತಿಗುಪ್ಪೆಯ ನಿವಾಸದಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಶಿವಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಪ್ಪ ಅವರ ಪುತ್ರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಸಮೀಪದ ಗುರುಶ್ರೀ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಜನತಾದಳದಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದ ಶಿವಪ್ಪ, 2005ರಲ್ಲಿ ಕಾಂಗ್ರೆಸ್ ನಿಂದ ಅತ್ತಿಗುಪ್ಪೆ ವಾರ್ಡ್ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಆ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಳಿಕ ಬಿಡಿಎ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

ಶಿವಪ್ಪ ಅಲ್ಲದೇ ಅವರ ಪತ್ನಿ ಕೂಡ ಕಾರ್ಪೊರೇಟರ್ ಅಗಿದ್ದರು. ಅಲ್ಲದೇ ಶಿವಪ್ಪ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಂದ್ರಾಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನವರಿ 2003 ರಲ್ಲಿ, ಚಂದ್ರಾ ಲೇಔಟ್ ಪೊಲೀಸರು ಶಿವಪ್ಪ ವಿರುದ್ಧ ಅತ್ಯಾಚಾರ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದರು. ಜನವರಿ 6 ರಂದು ಕಾನ್‌ಸ್ಟೆಬಲ್ ಮತ್ತು ಆತನ ಸ್ನೇಹಿತ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com