ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ತಂದೆಯ ಭೀಕರ ಹತ್ಯೆ
ಇಬ್ಬರು ಹೆಣ್ಣುಮಕ್ಕಳ ಮುಂದೆಯೇ ತಂದೆಯನ್ನು ಭೀಕರವಾಗಿ ಹತ್ಯೆಗೈದ ಘಟನೆ ನಗರದ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಮುಂದೆಯೇ ತಂದೆಯನ್ನು ಭೀಕರವಾಗಿ ಹತ್ಯೆಗೈದ ಘಟನೆ ನಗರದ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ದೀಪಕ್ ಕುಮಾರ್ ಸಿಂಗ್ (46) ಮೃತ ವ್ಯಕ್ತಿ. ಮೂಲತಃ ಬಿಹಾರದವರಾದ ಇವರು ಜಿಕೆವಿಕೆನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ಮೃತನ ಪತ್ನಿ ಇತ್ತೀಚೆಗೆ ಬಿಹಾರದ ತವರು ಮನೆಗೆ ತೆರಳಿದ್ದರು. ಇಬ್ಬರು ಹೆಣ್ಣು ಮಕ್ಕಳ ಜೊತೆ ಇದ್ದಾಗ ತಡರಾತ್ರಿ 1:30ರ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ನಾಲ್ವರು ಹಂತಕರು ತಲೆಗೆ ಮಚ್ಚುಬೀಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದು ಶೋಧ ಕಾರ್ಯ ಆರಂಭಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ