ಖ್ಯಾತ ಪ್ರವಾಸಿ ತಾಣ ಮುರುಡೇಶ್ವರ
ಖ್ಯಾತ ಪ್ರವಾಸಿ ತಾಣ ಮುರುಡೇಶ್ವರ

ಐಸಿಸ್ ಪತ್ರಿಕೆಯಲ್ಲಿ ಮುರುಡೇಶ್ವರ ಶಿವನ ಪ್ರತಿಮೆ ಭಗ್ನವಾದ ಚಿತ್ರ: ಹೆಚ್ಚಿನ ಭದ್ರತೆಗೆ ಕ್ರಮ ಎಂದ ಶಾಸಕ ಸುನೀಲ ನಾಯ್ಕ

ಐಸಿಸ್ ದಾಳಿ ಸಂಚಿನ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.

ಭಟ್ಕಳ: ಐಸಿಸ್  ದಾಳಿ ಸಂಚಿನ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.

ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ (the Voice of hind)ನಲ್ಲಿ ಮುರುಡೇಶ್ವರ (murudeshwar)ದ ಶಿವನ ವಿಗ್ರಹವನ್ನು ಪ್ರಕಟಿಸಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುನೀಲ ನಾಯ್ಕ ಅವರು, 'ಐಸಿಸ್ ಉಗ್ರ ಸಂಘಟನೆಯ ವಾಯ್ಸ ಆಫ್ ಹಿಂದ್ ಪತ್ರಿಕೆಯು ಮುರುಡೇಶ್ವರದ ಶಿವನ ಮೂರ್ತಿಯನ್ನು ಕೆಡವಿದಂತೆ ತನ್ನ ಮುಖಪುಟದಲ್ಲಿ ಪ್ರಕಟಿಸಿರುವುದು ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಗೃಹ ಸಚಿವರ ಜೊತೆ ದೂರವಾಣಿ ಮೂಲಕ ಚರ್ಚಿಸಲಾಗಿದೆ. ದೇಗುಲದ ಸುತ್ತ ಹೆಚ್ಚಿನ ಭದ್ರತೆಗೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

‘ಹಿಂದೂ ದೇವಾಲಯಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ನಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಲ್ಲಿ ಒಂದಾಗಿದೆ. ಉಗ್ರ ಸಂಘಟನೆಯ ಹೆಡೆ ಮುರಿಕಟ್ಟಲು ನಮ್ಮ ರಕ್ಷಣಾ ಇಲಾಖೆಯು ಸದೃಢ ಮತ್ತು ಸಶಕ್ತವಾಗಿದೆ. ಇಂತಹ ಪೊಳ್ಳು ಬೆದರಿಕೆಗೆ ಹೆದರುವ ಆಡಳಿತ ವ್ಯವಸ್ಥೆ ಈಗಿಲ್ಲ’ ಎಂದು ಅವರು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com