ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್, ನರ್ಸಿಂಗ್ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಪಾಸಿಟಿವ್

ಧಾರವಾಡ ಮತ್ತು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ಕೋವಿಡ್-19 ಕ್ಲಸ್ಟರ್‌ಗಳ ಸುದ್ದಿ ಹೊರಬಿದ್ದ ಮಾರನೇ ದಿನವೇ ರಾಜಧಾನಿಯಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಹೊರಹೊಮ್ಮಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಧಾರವಾಡ ಮತ್ತು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ಕೋವಿಡ್-19 ಕ್ಲಸ್ಟರ್‌ಗಳ ಸುದ್ದಿ ಹೊರಬಿದ್ದ ಮಾರನೇ ದಿನವೇ ರಾಜಧಾನಿಯಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಹೊರಹೊಮ್ಮಿದೆ.

ಈ ಬಾರಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರಿನ ಸ್ಪೂರ್ತಿ ಕಾಲೇಜ್ ಆಫ್ ನರ್ಸಿಂಗ್‌ನ 12 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

"ಈ 12 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶುಕ್ರವಾರ ಅವರ ವರದಿ ಪಾಸಿಟಿವ್ ಬಂದಿದೆ. ಅವರೆಲ್ಲರನ್ನೂ ಕೋವಿಡ್ -19 ಆರೈಕೆ ಕೇಂದ್ರದಲ್ಲಿ ಪ್ರತ್ಯೇಕಿಸಲಾಗಿದೆ. ಅವರಲ್ಲಿ ಯಾರಿಗೂ ಯಾವುದೇ ಪ್ರಯಾಣದ ಇತಿಹಾಸವಿಲ್ಲ. ಒಬ್ಬರನ್ನು ಹೊರತುಪಡಿಸಿ ಎಲ್ಲರಿಗೂ ಲಸಿಕೆ ಹಾಕಿಸಿಕೊಂಡಿದ್ದಾರೆ" ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಸಿಕೆ ಹಾಕದ ಒಬ್ಬ ವಿದ್ಯಾರ್ಥಿಗೆ ಈ ಹಿಂದೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಇನ್ನೂ ಲಸಿಕೆ ಪಡೆದಿಲ್ಲ.  ಎಲ್ಲಾ ವಿದ್ಯಾರ್ಥಿಗಳು ಜ್ವರ, ಶೀತ ಮತ್ತು ಕೆಮ್ಮು ಸೇರಿದಂತೆ ಸೌಮ್ಯ ಕೋವಿಡ್ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com