ಅರವಿಂದ ಲಿಂಬಾವಳಿ
ರಾಜ್ಯ
ರಾಜಕಾಲುವೆ ಒತ್ತುವರಿ: ಅರವಿಂದ ಲಿಂಬಾವಳಿ ವಿರುದ್ಧ ಎಎಪಿ ಆಕ್ರೋಶ
ರಾಜಕಾಲುವೆ ಒತ್ತುವರಿಯಿಂದಾಗಿ ಹಾಲನಾಯಕನಹಳ್ಳಿ ಜನತೆಗೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಎಎಪಿ ಪ್ರತಿಭಟನೆ ನಡೆಸಿತ್ತು.
ಬೆಂಗಳೂರು: ರಾಜಕಾಲುವೆ ಒತ್ತುವರಿಯಿಂದಾಗಿ ಹಾಲನಾಯಕನಹಳ್ಳಿ ಜನತೆಗೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಎಎಪಿ ಪ್ರತಿಭಟನೆ ನಡೆಸಿತ್ತು.
ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿರುವ ಸಂಬಂಧ, ಎಎಪಿ ಮುಖಂಡ ಹಾಗೂ ಮಾಜಿ ಬಿಜೆಪಿ ಶಾಸಕ ಎಚ್ಡಿ ಬಸವರಾಜು ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ರಾಜಕಾಲುವೆ ಒತ್ತುವರಿಯಿಂದಾಗಿ ಜುನ್ನಸಂದ್ರ ಮತ್ತು ಹಾಲನಾಯಕನಹಳ್ಳಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಾಸಕ ಅರವಿಂದ ಲಿಂಬಾವಳಿ ಮಹಾದೇವಪುರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಎಎಪಿ ಬೆಳ್ಳಂದೂರು ಯುವ ಘಟಕದ ಅಧ್ಯಕ್ಷ ಮನೋಹರ್ ರೆಡ್ಡಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಲಿಂಬಾವಳಿ ಮನೋಹರ್ ರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ದೂರಿದ್ದಾರೆ.

