ಭ್ರಷ್ಟಾಚಾರ ನಿಗ್ರಹ ದಳ ಹಿಡಿದಿದ್ದು 1,803 ಮಂದಿ; ಶಿಕ್ಷೆಗೊಳಗಾಗಿದ್ದು ಕೇವಲ 10 ಜನ ಮಾತ್ರ!

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತ್ತೀಚೆಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಹಿರಂಗಪಡಿಸಿದೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತ್ತೀಚೆಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಹಿರಂಗಪಡಿಸಿದೆ.  

ಆದರೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಅತ್ಯಲ್ಪವಾಗಿದೆ.  ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 2016 ರಲ್ಲಿ ಪ್ರಾರಂಭವಾದಾಗಿನಿಂದ ಇದುವರೆಗೆ 1,803 ಪ್ರಕರಣಗಳನ್ನು ದಾಖಲಿಸಿದೆ.

ಹೆಚ್ಚಿನ ಪ್ರಕರಣಗಳು ವಿಚಾರಣೆಯಲ್ಲಿದ್ದರೂ, ಎಸಿಬಿ ಕೇವಲ 10 ಪ್ರಕರಣಗಳಲ್ಲಿ ಶಿಕ್ಷೆ ನೀಡಲು ಮಾತ್ರ ಸಾಧ್ಯವಾಗಿದೆ. 25 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದಾರೆ.

ದಾಖಲಾದ 1,803 ಪ್ರಕರಣಗಳ ಪೈಕಿ 753 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, 682 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಈ ಪ್ರಕರಣಗಳಲ್ಲಿ, 391 ಕೇಸ್ ನಲ್ಲಿ ಕ್ಲಾಸ್ 1 ಮತ್ತು ಮೇಲ್ಪಟ್ಟವರು ಮತ್ತು ಜನಪ್ರತಿನಿಧಿಗಳು ಸೇರಿದಂತೆ 1,473 ಸರ್ಕಾರಿ ಸಿಬ್ಬಂದಿಯನ್ನು ಬಂಧಿಸಲಾಗಿದೆ.

1,335 ಆರೋಪಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರೆ, 493 ಸಿಬ್ಬಂದಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗಿದೆ.  87 ಪ್ರಕರಣಗಳಿಗೆ ನ್ಯಾಯಾಲಯಗಳು ತಡೆ ನೀಡಿದ್ದು, 106 ಪ್ರಕರಣಗಳು ಚಾರ್ಜ್‌ಶೀಟ್‌ಗಾಗಿ ಕಾಯುತ್ತಿವೆ ಏಕೆಂದರೆ ಪ್ರಾಸಿಕ್ಯೂಷನ್‌ಗೆ ಇನ್ನೂ ಅನುಮತಿ ಸಿಕ್ಕಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com