ಬಲವಂತದ ಮತಾಂತರ: ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಇಬ್ಬರು ಯುವಕರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಬೇಲೂರು ಪಟ್ಟಣದ ಹೊರವಲಯದಲ್ಲಿ ಕ್ರೈಸ್ತ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಬಲವಂತದ ಮತಾಂತರ: ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಹಾಸನ: ಇಬ್ಬರು ಯುವಕರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಬೇಲೂರು ಪಟ್ಟಣದ ಹೊರವಲಯದಲ್ಲಿ ಕ್ರೈಸ್ತ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇಬ್ಬರು ಯುವಕರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಬಿಲ್ಲೋಡು ರಸ್ತೆಯ ಪ್ರಾರ್ಥನಾ ಕೇಂದ್ರದ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಎರಡೂ ಕಡೆಯಿಂದ ಮಾತಿನ ಚಕಮಕಿ ನಡೆಯಿತು. ಬಜರಂಗದಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಮಂದಿರ ಮುತ್ತಿಗೆ ಹಾಕಲು ಯತ್ನಿಸಿದರು ಎಂದು ತಿಳಿದುಬಂದಿದೆ. ಈ ವೇಳೆ ಪ್ರಾರ್ಥನಾ ಮಂದಿರದ ಮುಖ್ಯಸ್ಥರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಗಳು ಕೇಳಿ ಬಂದಿವೆ.

ಈ ವೇಳೆ ಸ್ಥಳೀಯ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗದಂತೆಯೂ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದರು.

ತಾಲೂಕಿನಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಈ ಕುರಿತು ಪೊಲೀಸರಿಗೆ ದೂರುಗಳನ್ನು ನೀಡಿದರೂ ಪೊಲೀಸರು ದೂರುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರು ಆರೋಪಿಸಿದ್ದಾರೆ.

ಒಂದು ವೇಳೆ ಪೊಲೀಸರು ಬಲವಂತದ ಮತಾಂತರಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದೇ ಆದರೆ, ಪ್ರತಿಭಟನೆ ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಬೆಳಗಾವಿಯಲ್ಲಿ, ಹಲವಾರು ಕ್ರಿಶ್ಚಿಯನ್ ಸಂಸ್ಥೆಗಳು ಖಾಸಗಿ ಸ್ಥಳಗಳಲ್ಲಿ ನಡೆಸುತ್ತಿದ್ದ ಸಾರ್ವಜನಿಕ ಪ್ರಾರ್ಥನೆಗಳನ್ನು ಸ್ಥಳೀಯ ಆಡಳಿತವು ಸ್ಥಗಿತಗೊಳಿಸಿದ್ದರಿಂದ ಕ್ರಿಶ್ಚಿಯನ್ ಸಮುದಾಯವು ಆತಂಕಕ್ಕೊಳಗಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com