ಕೋವಿಡ್-19: ಸಾವಿನ ಸಂಖ್ಯೆಯಲ್ಲಿ ಇಳಿಕೆ; ರಾಜ್ಯದಲ್ಲಿಂದು 4 ಸಾವು, 636 ಹೊಸ ಪ್ರಕರಣ ಪತ್ತೆ, 745 ಗುಣಮುಖ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 636 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,77,225ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 636 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,77,225ಕ್ಕೆ ಏರಿಕೆಯಾಗಿದೆ.

745 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,27,029 ಆಗಿದೆ. ರಾಜ್ಯದಲ್ಲಿ ಸದ್ಯ 12,356 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ಸಾವಿನ ಪ್ರಮಾಣದಲ್ಲಿ ತೀವ್ರ ಇಳಿಕೆಯಾಗಿದ್ದು, ಇಂದು ಕೇವಲ 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟಾರೇ ಮೃತರ ಸಂಖ್ಯೆ 37,811ಕ್ಕೆ  ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೇ ಸೋಂಕಿನ ಪ್ರಮಾಣ ಶೇ. 0.37 ರಷ್ಟಿದ್ದು, ಮರಣ ಪ್ರಮಾಣ ಶೇ. 0. 62 ರಷ್ಟಿದೆ.

ಬೆಂಗಳೂರಿನಲ್ಲಿ 245 ಹೊಸ ಪ್ರಕರಣ ಪತ್ತೆಯಾಗಿದ್ದು, 206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಕೇವಲ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೀದರ್, ಗದಗ್, ಕಲಬುರಗಿ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com