ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ- ಸಚಿವ ಬಿ. ಸಿ.ಪಾಟೀಲ್

2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಕೃಷಿ ಸಚಿವ ಬಿ. ಸಿ. ಪಾಟೀಲ್
ಕೃಷಿ ಸಚಿವ ಬಿ. ಸಿ. ಪಾಟೀಲ್
Updated on

ಬೆಂಗಳೂರು: 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ  ಯೋಜನೆಯಡಿ 72‌34 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ಸಹಾಯಧನ ನೀಡಲಾಗುವುದು . ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಅವರು ವಿವರಿಸಿದರು.

ಕೃಷಿ ವಿಚಕ್ಷಣಾ ದಳದ ಮುಂದುವರೆದ ಜಫ್ತಿ: 2021 ಏಪ್ರಿಲ್ 1ರಿಂದ ಸೆ.30ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ ರೂ .415.78 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು,8039 ಟನ್ ಪ್ರಮಾಣದ ರೂ .145.32 ಲಕ್ಷ ರೂ. ಮೌಲ್ಯದ ರಸಗೊಬ್ಬರಗಳನ್ನು  5724 ಮತ್ತು 4592 ಕೆ.ಜಿ ಪ್ರಮಾಣದ ರೂ 640 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ ರೂ 62615 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com