ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಿಗೆ ಶಾಶ್ವತ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರು ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರಿ ಮಳೆ ಬಂದಾಗ ಬೆಂಗಳೂರು ನಗರದಲ್ಲಿ ಅತ್ಯಂತ ತಗ್ಗುಪ್ರದೇಶ, ಕೆರೆಗಳ ಆವರಣಗಳ ಭಾಗ,ರಾಜಾಕಾಲುವೆ ಭಾಗಗಳು ಜಲಾವೃತವಾಗುತ್ತಿವೆ. ಮಳೆ ಬಂದಾಗ ಸಮಸ್ಯೆಗಳನ್ನು ಸರಿಪಡಿಸುವುದು ತಾತ್ಕಾಲಿಕ ಪರಿಹಾರವಾಗುತ್ತದೆ. ಆದ್ದರಿಂದ ಜಲಾವೃತ್ತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರವನ್ನು ನೀಡಲು ಪುನರ್ನಿರ್ಮಾಣ ಮತ್ತು ಪುರ್ನವಸತಿ ಕಾರ್ಯವಾಗಬೇಕು ಎಂದು ಅವರು ತಿಳಿಸಿದರು

ರಾಜಾಕಾಲುವೆಯಲ್ಲಿ ಹಾಗೂ ಕೆರೆ ಆವರಣಗಳು ಒತ್ತುವರಿಯಾಗಿ ನಿರ್ಮಾಣವಾದ ವಸತಿಪ್ರದೇಶಗಳ ಬಗ್ಗೆ ಸರ್ವೇ ಮಾಡಿ ಪುನರ್ವಸತಿ ಕಲ್ಪಿಸಲಾಗುವುದು. ದೀರ್ಘಕಾಲಿಕ ಹಾಗೂ ಶಾಶ್ವತ  ಪರಿಹಾರ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಸ್ತೆಗಳು ನಿರ್ಮಾಣದ ಅವಧಿ, ನಿರ್ವಹಣೆ, ದುರಸ್ತಿ, ಗುಣಮಟ್ಟ ಹಾಗೂ ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರರ ಬಗ್ಗೆ ಸಂಪೂರ್ಣ ವರದಿ ನೀಡಲು ಟಾಸ್ಕ್ ಫೋರ್ಸ್ ನ್ನು ರಚಿಸಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ವೈಜ್ಞಾನಿಕವಾಗಿ ಆಗಬೇಕು. ಮಳೆಗಾಲವಾದ ನಂತರ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.

ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದು ನನ್ನ ಕರ್ತವ್ಯ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ದಸರಾ ಉತ್ಸವವನ್ನು ಎಸ್ ಎಂ ಕೃಷ್ಣ ಉದ್ಘಾಟನೆ ಮಾಡಲಿದ್ದಾರೆ. ಒಬ್ಬ ಸಾಮಾನ್ಯ ನಾಗರಿಕನಾಗಿ ಈ ಬಾರಿಯ ದಸರಾ ಉತ್ಸವವನ್ನು ಮುನ್ನಡೆಸುತ್ತಿರುವುದು ನನಗೆ ಸಂತೋಷ ತಂದಿದೆ. ಕೋವಿಡ್ ನಿಂದಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಲಾಗುತ್ತಿದೆ. ಕನ್ನಡ ನಾಡು ಸುಭಿಕ್ಷವಾಗಿರಲೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com