ಬಡವರಿಂದ ಮಕ್ಕಳು ಖರೀದಿಸಿ ಶ್ರೀಮಂತರಿಗೆ ಮಾರಾಟ ಮಾಡುತ್ತಿದ್ದವರ ಬಂಧನ

ಮಕ್ಕಳಾಗದ ದಂಪತಿಗೆ ಬಾಡಿಗೆ ತಾಯಿ ಮೂಲಕ ಮಕ್ಕಳನ್ನು ಕೊಡಿಸುತ್ತೇವೆ ಎಂದು ಹೇಳಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧನ (ಸಾಂಕೇತಿಕ ಚಿತ್ರ)
ಬಂಧನ (ಸಾಂಕೇತಿಕ ಚಿತ್ರ)

ಬೆಂಗಳೂರು: ಮಕ್ಕಳಾಗದ ದಂಪತಿಗೆ ಬಾಡಿಗೆ ತಾಯಿ ಮೂಲಕ ಮಕ್ಕಳನ್ನು ಕೊಡಿಸುತ್ತೇವೆ ಎಂದು ಹೇಳಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ದೇವಿ ಷಣ್ಮುಗಮ್ಮ, ಮಹೇಶ್, ರಾಜಣ್ಣ, ಜನಾರ್ಧನ್, ಧನಲಕ್ಷ್ಮೀ ಬಂಧಿತ ಆರೋಪಿಗಳು. ಆರೋಪಿಗಳು ಬಡಕುಟಂಬದ ಮಕ್ಕಳನ್ನು ಕಡಿಮೆ ಹಣಕ್ಕೆ ಖರೀದಿಸುತ್ತಿದ್ದರು. ಬಳಿಕ ಮಕ್ಕಳಿಲ್ಲದವರಿಗೆ ಬಾಡಿಗೆ ತಾಯಿ ಮೂಲಕ ಮಗುವಾಗಿದೆ ಎಂದು ನಂಬಿಸಿ, ಲಕ್ಷಗಟ್ಟಲೇ ಹಣ ಪಡೆದು ವಂಚಿಸುತ್ತಿದ್ದರು. 

ಇದೇ ರೀತಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಖಾಕಿ, ದಾಳಿ ನಡೆಸಿ 13 ಮಕ್ಕಳನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ನಗರ ದಕ್ಷಿಣ ವಿಭಾಗದ ಡಿಸಿಪಿ ಹರೀಶ್​ ಪಾಂಡೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com