ರಾಜ್ಯದಲ್ಲಿ ಕೊರೋನಾ ಇಳಿಕೆ: 332 ಸೋಂಕಿತರು ಪತ್ತೆ; 515 ಚೇತರಿಕೆ, 11 ಸಾವು; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 332 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ. 332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 332 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ.

332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸೋಂಕು 29,34,085ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,712 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,906ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ. 3.31 ರಷ್ಟಿದೆ. ಬೆಂಗಳೂರಿನಲ್ಲಿ 145 ಹೊಸ ಪ್ರಕರಣ ಪತ್ತೆಯಾಗಿದ್ದು, 125 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು  ಸೋಂಕಿತರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com