ಕಮಲಾನಗರದಲ್ಲಿ ಕಟ್ಟಡ ಕುಸಿತ: ಸಂತ್ರಸ್ಥರಿಗೆ ವೈಯಕ್ತಿಕ ಪರಿಹಾರ ನೀಡಿದ ಡಿ.ವಿ. ಸದಾನಂದ ಗೌಡ

ಇತ್ತೀಚಿಗೆ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮಲಾನಗರದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥರಿಗೆ ಸಂಸದ ಸದಾನಂದ ಗೌಡ ವೈಯುಕ್ತಿಕ ಪರಿಹಾರ ವಿಚರಣೆ ಮಾಡಿದರು. 
ಕಮಲಾನಗರಕ್ಕೆ ಭೇಟಿ ನೀಡಿದ ಸದಾನಂದಗೌಡ
ಕಮಲಾನಗರಕ್ಕೆ ಭೇಟಿ ನೀಡಿದ ಸದಾನಂದಗೌಡ

ಬೆಂಗಳೂರು: ಇತ್ತೀಚಿಗೆ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮಲಾನಗರದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥರಿಗೆ ಸಂಸದ ಸದಾನಂದ ಗೌಡ ವೈಯುಕ್ತಿಕ ಪರಿಹಾರ ವಿಚರಣೆ ಮಾಡಿದರು. 

ಇಂದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಅವರೊಂದಿಗೆ ಸಂಸದ ಸದಾನಂದ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿದ ಅವರು ಬಳಿಕ ಕಟ್ಟಡದಲ್ಲಿ ವಾಸವಿದ್ದ 6 ಕುಟುಂಬಗಳಿಗೆ ತಲಾ 1 ಲಕ್ಷ ರೂನಂತೆ ವೈಯಕ್ತಿಕ ಪರಿಹಾರ ವಿತರಿಸಿದರು. 

ಈ ವೇಳೆ ಮಾತನಾಡಿದ ಸಂಸದ ಡಿ.ವಿ. ಸದಾನಂದ ಗೌಡ, 'ಮುನ್ನೆಚ್ಚರಿಕೆ ಕ್ರಮವಾಗಿ ಜನರ ಸ್ಥಳಾಂತರ ಮಾಡಲಾಗಿತ್ತು. ಇಲ್ಲದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು. ಬಿಬಿಎಂಪಿ ಅಧಿಕಾರಿಗಳು ಕೇವಲ ನೋಟಿಸ್ ಕೊಡುವುದಲ್ಲ. ಒಂದು ರೌಂಡ್ ಇಂತಹ ಕಟ್ಟಡಗಳನ್ನು ಗುರುತಿಸಬೇಕು. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ಮಾತನಾಡುತ್ತೇವೆ ಎಂದರು.

ಡಿಕೆಶಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ: ಸ್ವತಂತ್ರ ತನಿಖೆ ಮಾಡಿಸಬೇಕು
ಇದೇ ವೇಳೆ ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ, ಉಗ್ರಪ್ಪ ಚರ್ಚೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, ಇದನ್ನು ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು. ಕಾಂಗ್ರೆಸ್ ಪಕ್ಷ ಈಗಾಗಲೇ ಅಧಃಪತನದತ್ತ ಸಾಗಿದೆ. ಪಕ್ಷದ ಕಚೇರಿಯಲ್ಲಿ ಈ ರೀತಿಯಾಗಿ ಮಾತನಾಡಿದ್ದಾರೆ. ಇದರ ಹಿಂದೆ ಬಲಿಷ್ಠರು ಯಾರಾದರೂ ಇರಲೇಬೇಕಲ್ಲವಾ? ಅದು ಯಾರು, ಏನು ಎಂದು ಡಿಕೆಶಿಯವರೇ ತಿಳಿದುಕೊಳ್ಳಲಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com