ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸಂತಾಪ

ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕನ್ನಡದ ಹಿರಿಯ ನಟ, ಚಿಂತಕ ಪ್ರೊ ಜಿ.ಕೆ.ಗೋವಿಂದರಾವ್ ಅವರು,  ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ಗೋವಿಂದರಾವ್‌ ಅವರು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಾದದಲ್ಲಿ ನಂಬಿಕೆ ಇರಿಸಿದ್ದರು. ಸಮಾಜದಲ್ಲಿ ಯಾವುದೇ ಸಮಸ್ಯೆ ಕಂಡುಬಂದಾಗ ಧ್ವನಿ ಎತ್ತುತ್ತಿದ್ದರು. ಅವರ ನಿಧನದಿಂದ ಪ್ರಖರ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರ ನಿಧನದ ನೋವನ್ನು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕುಟುಂಬ ಸದಸ್ಯರಿಗೆ ನೀಡಲಿ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com