ಸಂಗ್ರಹ ಚಿತ್ರ
ರಾಜ್ಯ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಸೆಲ್ಲರ್ ಗೆ ಬಿದ್ದ 14 ವರ್ಷದ ಬಾಲಕ ದುರ್ಮರಣ
ನಗರದ ಕೆಜಿ ಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದ ಸೆಲ್ಲರ್ ಗೆ ಬಿದ್ದು 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಬೆಂಗಳೂರು: ನಗರದ ಕೆಜಿ ಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದ ಸೆಲ್ಲರ್ ಗೆ ಬಿದ್ದು 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಸೆಲ್ಲರ್ ಗೆ ಬಿದ್ದು ಮೃತಪಟ್ಟ ಬಾಲಕನನ್ನು 14 ವರ್ಷದ ಚಂದ್ರು ಎಂದು ಗುರುತಿಸಲಾಗಿದೆ. ಆಟ ವಾಡುತ್ತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಬಾಲಕನ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಾಗಿದೆ
ಬೆಂಗಳೂರಿನಲ್ಲಿ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ