ಶ್ರೀ ಮುರುಘಾ ಶರಣರ ಕುರಿತಾದ ಕಾಫಿ ಟೇಬಲ್ ಬುಕ್ ಲೋಕಾರ್ಪಣೆ: ಮಠಾಧೀಶರಾಗಿ 30 ವರ್ಷ ಪೂರೈಸಿದ ಶ್ರೀಗಳು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಪಿ.ಸುರೇಶ್ ಕುಮಾರ್ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರು ಹಾಜರಿದ್ದರು. 
ಪುಸ್ತಕ ಬಿಡುಗಡೆಗೊಳಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪುಸ್ತಕ ಬಿಡುಗಡೆಗೊಳಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on

ಚಿತ್ರದುರ್ಗ: ಶ್ರೀ ಮುರುಘಾ ಮಠ ಸೋಮವಾರ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಮಠಾಧೀಶರಾಗಿ ಡಾ. ಶಿವಮೂರ್ತಿ ಮುರುಘಾ ಶರಣರು 30 ವರ್ಷಗಳನ್ನು ಪೂರೈಸಿದ್ದಾರೆ. ಆ ಪ್ರಯುಕ್ತ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ವಿಶ್ವರೂಪಿ ಡಾ.ಶಿವಮೂರ್ತಿ ಮುರುಘಾ ಶರಣರು ಕಾಫಿ ಟೇಬಲ್ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಕಾಫಿ ಟೇಬಲ್ ಪುಸ್ತಕವನ್ನು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಹೊರತಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಪಿ.ಸುರೇಶ್ ಕುಮಾರ್ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರು ಹಾಜರಿದ್ದರು. 

ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು ಮನುಷ್ಯರನ್ನೂ, ಪ್ರಾಣಿಗಳನ್ನೂ ಪ್ರೀತಿ ವಾತ್ಸಲ್ಯದಿಂದ ಕಾಣುವುದೇ ಶರಣ ಸಂಸ್ಕೃತಿಯ ಹೆಗ್ಗಳಿಕೆ ಎಂದರು. ಕರ್ತವ್ಯ ಪಾಲನೆ ದೇವರ ಆರಾಧನೆಗಿಂತಲೂ ಮಿಗಿಲು ಎನ್ನುವ ಮಾಣಿಕ್ಯದಂಥ ಮಾತುಗಳನ್ನು ಶರಣರು ನಮ್ಮ ನಡುವೆ ಬಿಟ್ಟುಹೋಗಿದ್ದಾರೆ ಎಂದವರು ಹೇಳಿದರು.

ಯಡಿಯೂರಪ್ಪ ಅವರು ಮುರುಘಾ ಮಠ ಬಸವ ತತ್ವವನ್ನು ಜಗತ್ತಿನೆಲ್ಲೆಡೆ ಸಾರುವ ಮಹತ್ತರ ಕೆಲಸದಲ್ಲಿ ನಿರತವಾಗಿದೆ, ಮುರುಘಾ ಶರಣರು ಬಡವರಿಗೆ, ನೊಂದವರಿಗೆ ದಾರಿದೀಪವಾಗಿದ್ದಾರೆ ಎಂದಿದ್ದಾರೆ.

ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುರುಘಾ ಶರಣರು ಚಿತ್ರದುರ್ಗ ಇಂದಿಗು ಹಿಂದುಳಿದಿದ್ದು, ಶಾಸಕರು ಅಭಿವೃದ್ಧಿ ಯೋಜನೆಗಳನ್ನು ಜಿಲ್ಲೆಗೆ ಪರಿಚಯಿಸಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆಯ ರೆಸಿಡೆಂಟ್ ಎಡಿಟರ್ ಸಾಂತ್ವನ ಭಟ್ಟಾಚಾರ್ಯ ಅವರು ಶ್ರೀಗಳ ದೂರದೃಷ್ಟಿತ್ವ ಹಾಗೂ ಸಮಾಜಸೇವೆಯನ್ನು ಕುರಿತು ಮೆಚ್ಚುಗೆ ಸೂಚಿಸಿದರು. 

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com