KFC ವಿರುದ್ಧ ಕನ್ನಡ ಕಹಳೆ: ಸಾಮಾಜಿಕ ಜಾಲತಾಣದಲ್ಲಿ #KFCಕನ್ನಡಬೇಕು ಟ್ರೆಂಡ್, ಹಳೆಯ ವಿಡಿಯೋ ಎಂದು ಕೆಎಫ್ ಸಿ ಸ್ಪಷ್ಟನೆ

ಬೆಂಗಳೂರಿನ ಕೆಎಫ್‌ಸಿ ಮಳಿಗೆಯಲ್ಲಿ ಮಹಿಳೆಯೊಬ್ಬರು ಕನ್ನಡ ಹಾಡು ಹಾಕದ ಕಾರಣದಿಂದಾಗಿ ಕೆಎಫ್‌ಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇಲ್ಲಿನ ಕೆಎಫ್‌ಸಿ ಮಳಿಗೆಯಲ್ಲಿ ಕನ್ನಡ ಹಾಡು ಹಾಕದ ವಿಚಾರದಲ್ಲಿ ವಾಗ್ವಾದ ನಡೆದ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ರಾಜ್ಯೋತ್ಸವದ ಮುನ್ನಲೆಯಲ್ಲಿ ಸಾಮಾಜಿಕ ಜಾಲತಾಣ 'ಕೂ' ನಲ್ಲಿ  #KFCಕನ್ನಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

'ಬೆಂಗಳೂರಿನ ಕೆಎಫ್‌ಸಿ ಮಳಿಗೆಯಲ್ಲಿ ಮಹಿಳೆಯೊಬ್ಬರು ಕನ್ನಡ ಹಾಡು ಹಾಕದ ಕಾರಣದಿಂದಾಗಿ ಕೆಎಫ್‌ಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. #KFCಕನ್ನಡಬೇಕು ಎಂಬ ಹ್ಯಾಷ್ ಟ್ಯಾಗ್ ಅಡಿ ಅನೇಕರು ಕರ್ನಾಟಕದಲ್ಲಿ ಕನ್ನಡ ಬಳಸಲಿ ಎನ್ನುವ ಧೋರಣೆಯನ್ನು ವ್ಯಕ್ತಪಡಿಸಿದ್ದಾರೆ. 

'Kfc ಅಮೆರಿಕ ಮೂಲದ ಕರ್ನಲ್ ಹರ್ಲ್ಯಾಂಡ್ ಸ್ಯಾಂಡರ್ಸ್ ಎಂಬ ವೃದ್ಧನಿಂದ ಆರಂಭವಾಗಿ ಜನಪ್ರಿಯವಾಗಿದೆ. ಕಂಪನಿ ಯಾವುದೇ ಇದ್ದರೂ,ಆಯಾ ಪ್ರಾದೇಶಿಕ ಭಾಷೆಗೆ ಮಾನ್ಯತೆ ನೀಡಿ ಪ್ರಾದೇಶಿಕ ಭಾಷೆ ಅರಿತ ವ್ಯಕ್ತಿಗಳಿಗೆ ಉದ್ಯೋಗ ನೀಡಿದಲ್ಲಿ ಯಾವುದೇ ತೊಂದರೆಗಳು ಉಂಟಾಗದು. ಅಂತೆಯೇ ನಾವು ಕೂಡ ನಮ್ಮ ನಾಡಿನ ಭಾಷೆಯನ್ನು ಬಳಸುವ ಪದ್ಧತಿಯನ್ನು ಬೆಳೆಸಿಕೊಳ್ಳಬೇಕು.ಕನ್ನಡ ಭಾಷೆ ಗೊತ್ತಿದ್ದರೂ ನಟನೆ ಮಾಡುವ ಜನ  ತಮ್ಮಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು' ಎಂದು ಸವಿತಾ ಎನ್ನುವವರು ಕೂ ಮಾಡಿದ್ದಾರೆ. 

'ಇಂತಹ ತಿಕ್ಕಾಟಗಳಿಗೆ ಕಾರಣ ,ವಿಶೇಷವಾಗಿ ಬೆಂಗಳೂರಿನಲ್ಲಿರುವ ಕನ್ನಡಿಗರು ಕನ್ನಡಕ್ಕೆ ಬೆಲೆ ಕೊಡದಿರುವುದು ಮತ್ತು ಅನ್ಯ ಭಾಷೆಯ ಮೇಲೆ ಮೋಹ ತೋರುವುದು! ಬೆಂಗಳೂರಿನ KFC ,ಬರ್ಗರ್ ಕಿಂಗ್ ಮತ್ತು ಮ್ಯಾಕ್  ಡೊನಾಲ್ಡ್ ಮಳಿಗೆಗಳಲ್ಲಿ 65 % ಕ್ಕೂ ಅಧಿಕ ಗ್ರಾಹಕರು ಅನ್ಯಭಾಷಿಕರು!! ಸರ್ಕಾರ ಕೆಲವು ಶಿಸ್ತಿನ ನಿಯಮ ತರೆದ ಹೊರತು ಏನೂ ಅಲ್ಲಾಡುವುದಿಲ್ಲ!' ಎಂದು ಮಂಜುನಾಥ್ ಎನ್ನುವರು ಬರೆದುಕೊಂಡಿದ್ದಾರೆ. 

'ತಮಿಳುನಾಡು ತರಹ ನಾವು ಕೂಡ ಕನ್ನಡ ಮಾತನಾಡು ಇಲ್ಲದಿದ್ದರೆ ಜಾಗ ಖಾಲಿ ಮಾಡು. ಸ್ವಲ್ಪ ದಿನ ಖರೀದಿ kfc ban ಮಾಡಿ ನೋಡಿ ಒಂದೇ ವಾರದಲ್ಲಿ ,ಕನ್ನಡ ಕನ್ನಡ ಅಂತ ಬರ್ತಾನೆ .ನಾವು ಒಗ್ಗಟ್ಟಾಗೋಣ' ಎಂದು ಬನಶಂಕರ್ ಅಭಿಪ್ರಾಯ ಪಟ್ಟಿದ್ದಾರೆ. 

ಹಳೆಯ ವಿಡಿಯೋ: ಕೆಎಫ್ ಸಿ ಸ್ಪಷ್ಟನೆ
ಇನ್ನು ವೈರಲ್ ವಿಡಿಯೋ ಕುರಿತಂತೆ ಕೆಎಫ್ ಸಿ ಸ್ಪಷ್ಟನೆ ನೀಡಿದ್ದು, ಈ ಕುರಿತು ಮಾತನಾಡಿರುವ ಕೆಎಫ್‌ಸಿ ವಕ್ತಾರರು, "ಇದು ಹಳೆಯ ವಿಡಿಯೋ ಮತ್ತು ಈಗ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ಕೆಎಫ್‌ಸಿ ಇಂಡಿಯಾ ಎಲ್ಲಾ ಸಮುದಾಯದ ಸಾಂಸ್ಕೃತಿಕ ಮೌಲ್ಯಗಳ ಕುರಿತು ಅತ್ಯುನ್ನತ ಗೌರವ ಹೊಂದಿದೆ. ನಾವು ದೇಶಾದ್ಯಂತ ಬ್ರ್ಯಾಂಡ್ ಹೊಂದಿರುವುದರಿಂದ, ಗ್ರಾಹಕರು ದೇಶದ ಯಾವುದೇ ರೆಸ್ಟೊರೆಂಟ್‌ಗೆ ಆಗಮಿಸಿದರೂ, ಒಂದೇ ರೀತಿಯ ಕೆಎಫ್‌ಸಿ ಅನುಭವ ಪಡೆಯಬೇಕು ಎಂಬುದು ನಮ್ಮ ಗುರಿ. ಈ ಉದ್ದೇಶದಿಂದಲೇ ಎಲ್ಲಾ ರೆಸ್ಟೋರೆಂಟ್‌ಗಳಲ್ಲಿ ಕೇಂದ್ರ ಕಚೇರಿಯಿಂದ ಪರವಾನಗಿ ದೊರೆತ ಹಾಗೂ ಖರೀದಿಸಿ ಗೀತೆಗಳ ಸಂಗ್ರಹ ಇರಿಸಲಾಗಿದೆ. ಮತ್ತು ದೇಶಾದ್ಯಂತ ಎಲ್ಲಾ ರೆಸ್ಟೋರೆಂಟ್‌ಗಳಲ್ಲಿ ಅವುಗಳನ್ನೇ ಪ್ರಸಾರ ಮಾಡಲಾಗುತ್ತದೆ.” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com