ರಾಜ್ಯದಲ್ಲಿಂದು ಕೊರೋನಾಗೆ 17 ಜನರ ಸಾವು: 478 ಹೊಸ ಪ್ರಕರಣ ಪತ್ತೆ, 334 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. 

334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ  2,94, 0673 ಆಗಿದೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಸೋಂಕಿನಿಂದ 17 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 38054ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ 0.42 ರಷ್ಟಿದ್ದು, ಮರಣ ಪ್ರಮಾಣ ಶೇ. 3.55 ರಷ್ಟಿದೆ.

ಬೆಂಗಳೂರಿನಲ್ಲಿ 235 ಹೊಸ ಪ್ರಕರಣ ಪತ್ತೆಯಾಗಿದ್ದು, 161 ಸೋಂಕಿತರು ಗುಣಮುಖರಾಗಿದ್ದಾರೆ. ಏಳು ಸೋಂಕಿತರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬೆಳಗಾವಿ, ಬೀದರ್, ದಾವಣಗೆರೆ, ಗದಗ್, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com