ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 179 ಸೇರಿ 381 ಪ್ರಕರಣ ಪತ್ತೆ; 7 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 381 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,87,694ಕ್ಕೆ ಏರಿಕೆಯಾಗಿದೆ.
ಕೇರದಳದಲ್ಲಿ ಗರ್ಭಿಣಿಯರಿಗೆ ಕೊರೋನಾ ಸೋಂಕು (ಸಂಗ್ರಹ ಚಿತ್ರ)
ಕೇರದಳದಲ್ಲಿ ಗರ್ಭಿಣಿಯರಿಗೆ ಕೊರೋನಾ ಸೋಂಕು (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 381 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,87,694ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,061ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 179 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,51,569ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 305 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,40,978ಕ್ಕೆ ಏರಿಕೆಯಾಗಿದೆ. ಇನ್ನು 8,626 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,12,658 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 381 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.33ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com