ಪುನೀತ್ ರಾಜ್ ಕುಮಾರ್
ರಾಜ್ಯ
ಪುನೀತ್ ಆರೋಗ್ಯ ಸ್ಥಿತಿ ಗಂಭೀರ: ಏನೂ ಹೇಳಲಾಗದು- ಆಸ್ಪತ್ರೆ ವೈದ್ಯರ ಹೇಳಿಕೆ
ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.
ಬೆಂಗಳೂರು: ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.
ಇಂದು ಬೆಳಗ್ಗೆ ಎದೆನೋಪು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಪುನೀತ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಮಾಹಿತಿ ನೀಡಿದರು.
ಹೃದಯಾಘಾತಕ್ಕೆ ನೀಡಬೇಕಾದ ಚಿಕಿತ್ಸೆಗಳನ್ನು ನೀಡಿದ್ದೇವೆ. ಈಗಲೂ ನಾವು ಅಂತಿಮ ಪ್ರಯತ್ನ ಮಾಡುತ್ತಿದ್ದೇವೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವೇ ಸಮಯದಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಮಾಹಿತಿ ನೀಡಲಾಗುವುದು ಎಂದು ಡಾ. ರಂಗನಾಥ್ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ