ಬೆಳಗಾವಿ: ಪುನೀತ್ ರಾಜ್ ಕುಮಾರ್'ಗೆ ಶ್ರದ್ಧಾಂಜಲಿ ಸಲ್ಲಿಸಿ ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಿಂದ ನೊಂದ ಅಭಿಮಾನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಥಣಿಯಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಿಂದ ನೊಂದ ಅಭಿಮಾನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಥಣಿಯಲ್ಲಿ ವರದಿಯಾಗಿದೆ.

ಮೃತರನ್ನು ರಾಹುಲ್ ಗಾಡಿವಡ್ಡರ (26) ಎಂದು ಗುರುತಿಸಲಾಗಿದೆ. ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಇವರು ಶುಕ್ರವಾರ ಸಂಜೆ ಗೆಳೆಯರೊಂದಿಗೆ ಸೇರಿ ಪುನೀತ್ ರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮನೆಗೆ ತೆರಳಿದ್ದರು.

ಮನೆಗೆ ತೆರಳಿದ ಸಂದರ್ಭದಲ್ಲಿ ಅತೀವ್ರ ದುಃಖದಲ್ಲಿದ್ದ ವ್ಯಕ್ತಿ ಇದ್ದಕ್ಕಿಂದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com