ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ನಿಧನ ಸುದ್ದಿ ಕೇಳಿ ಆಘಾತ: ಅಭಿಮಾನಿ ಸಾವು

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ಕೇಳಿ ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ಕೇಳಿ ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಶುಕ್ರವಾರ ನಡೆದಿದೆ.

ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತಪಟ್ಟವರು. ನಿನ್ನೆ ಬೆಳಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು.

ಅಪ್ಪು ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

7 ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಮುನಿಯಪ್ಪ, ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಮರೂರು ಗ್ರಾಮದಲ್ಲಿ ವಾಸವಿದ್ದರು.

ಪುನೀತ್ ಅವರ ಪ್ರತಿಯೊಂದು ಸಿನಿಮಾವನ್ನು ತಪ್ಪದೇ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದರು. ಮುನಿಯಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com