ಇಂದಿರಾ ಗಾಂಧಿ ಬಡವರ ಪಾಲಿನ ನಿಜ ದೇವತೆ: ಸಿದ್ದರಾಮಯ್ಯನವರಿಂದ ಗುಣಗಾನ

ಇಂದಿರಾ ಗಾಂಧಿ ಪುಣ್ಯಸ್ಮರಣೆ ಸಂದರ್ಭ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂದಿರಾ ಸಾಧನೆಯ ಮೆಲುಕು ಹಾಕಿದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ದಿವಂಗತ ಪ್ರಧಾನಿ ಇಂದಿರಾಗಾಂಧಿ ದೇಶ ಕಂಡ ಮಹಾನ್ ಧೀಮಂತ ನಾಯಕಿ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಗುಣಗಾನ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ಪಟೇಲ್ ಜನ್ಮದಿನದ ಅಂಗವಾಗಿ ಇಬ್ಬರೂ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಇಂದಿರಾ ಗಾಂಧಿ 16 ವರ್ಷಗಳ ಕಾಲ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬಾಲ್ಯದಿಂದ ಅಪಾರ ದೇಶ ಭಕ್ತಿ ಬೆಳೆಸಿಕೊಂಡಿದ್ದ ಅವರು ಸ್ವಾತಂತ್ರ್ಯ ಹೋರಾಟಗಾರರ ಜತೆಯಲ್ಲೇ ಬೆಳೆದಿದ್ದರು. ದೇಶದ ಪ್ರಧಾನಿಯಾಗಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಬಹಳ ವಿರೋಧ ಎದುರಿಸಿದ್ದರು ಎಂದು ಹಳೆಯ ನೆನಪುಗಳನ್ನು ಸಿದ್ದರಾಮಯ್ಯ ಮೆಲುಕು ಹಾಕಿದರು.

ಇದನ್ನೂ ಓದಿ: ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು: ಅಸಹಾಯಕ ಡಿಕೆಶಿ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com