ನಟ ಪುನೀತ್ ಸಾವು: ಡಾ.ದೇವಿ ಶೆಟ್ಟಿ ಹೆಸರಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ- ನಾರಾಯಣ ಆಸ್ಪತ್ರೆ ಸ್ಪಷ್ಟನೆ

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದ್ದು, ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ನಾರಾಯಣ ಹೆಲ್ತ್ ಆಸ್ಪತ್ರೆ ಸ್ಪಷ್ಟಪಡಿಸಿದೆ.
ಪುನೀತ್‌ ರಾಜ್‌ಕುಮಾರ್‌
ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದ್ದು, ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ನಾರಾಯಣ ಹೆಲ್ತ್ ಆಸ್ಪತ್ರೆ ಸ್ಪಷ್ಟಪಡಿಸಿದೆ.

ಪ್ರಸ್ತುತ ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಗಳಲ್ಲಿ ಡಾ.ದೇವಿಶೆಟ್ಟಿ ಹೆಸರಿನಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ಸಂದೇಶಗಳು ನಕಲಿಯಾಗಿವೆ. ದೇವಿಶೆಟ್ಟಿಯವರ ಕಚೇರಿಯಿಂದ ಇಂತಹ ಯಾವುದೇ ಸಂದೇಶಗಳನ್ನು ನೀಡಲಾಗಿಲ್ಲ ಎಂದು ಹೇಳಿದೆ.

ಈ ಹಿಂದೆ ಕೊರೋನಾ ಸಾಂಕ್ರಾಮಿಕ ರೋಗ ಕುರಿತಂತೆಯೂ ದೇವಿಶೆಟ್ಟಿಯವರ ಹೆಸರಿನಲ್ಲಿ ನಕಲಿ ಆಡಿಯೋ ಸಂದೇಶಗಳು ಹರಿದಾಡಿದ್ದವು. ಈ ವೇಳೆಯೂ ಆಸ್ಪತ್ರೆ ಸ್ಪಷ್ಟನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com