ಕರ್ನಾಟಕದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಶೇ.60ಕ್ಕೆ ಏರಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಶೇ.40 ರಿಂದ ಶೇ.60 ಕ್ಕೆ ಏರಿಸುವುದು ಕರ್ನಾಟಕ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಶೇ.40 ರಿಂದ ಶೇ.60 ಕ್ಕೆ ಏರಿಸುವುದು ಕರ್ನಾಟಕ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಮೆರಿಕನ್ ಛೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್ ) ಸಂಸ್ಥೆಯ 29 ನೇ ವಾರ್ಷಿಕ  ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ನಿರ್ಮಾಣದಲ್ಲಿ ಕರ್ನಾಟಕ ರಾಜ್ಯ ತನ್ನದೇ ಕೊಡುಗೆ ನೀಡಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿಯೂ ಕರ್ನಾಟಕ ಪ್ರಮುಖ ಪಾತ್ರವನ್ನು ವಹಿಸಿದೆ ಎಂದರು.

ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸುವ  ಇಸ್ರೋ  ತನ್ನ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಇಂಜಿನಿಯರಿಂಗ್ ಕಾಲೇಜುಗಳಿದ್ದು, ಐಐಟಿ, ಐಐಎಂ ಹಾಗೂ ಐಐಎಸ್ಸಿ ಮುಂತಾದ ಶ್ರೇಷ್ಠ ಕಾಲೇಜುಗಳನ್ನು ಬೆಂಗಳೂರು ಹೊಂದಿದೆ. ಇವುಗಳು ರಾಜ್ಯದ ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com