ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆ ಸಾವು

ಹುಬ್ಬಳ್ಳಿ-ಧಾರಾವಾಡ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯನಿರತ ಪೊಲೀಸ್​​ ಪೇದೆ ಓರ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ: ಹುಬ್ಬಳ್ಳಿ-ಧಾರಾವಾಡ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯನಿರತ ಪೊಲೀಸ್​​ ಪೇದೆ ಓರ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. 

ಮೃತರನ್ನು 28 ವರ್ಷದ ನಿಂಗಪ್ಪ ಭೂಸಣ್ಣವರ ಎಂದು ಗುರುತಿಸಲಾಗಿದೆ. ನಿಂಗಪ್ಪ ಭೂಸಣ್ಣವರ, ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಧಾರವಾಡ-ಹುಬ್ಬಳ್ಳಿ ರಸ್ತೆಯ ಯಾಲಕ್ಕಿ ಶೆಟ್ಟರ್ ಕಾಲೋನಿ ಬಳಿ ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ನಿಂಗಪ್ಪ ಭೂಸಣ್ಣವರ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com