2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: 2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ನಾಗೇಶ್, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಸಾಧನೆ ಮಾಡಿ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿರುವ ಶಿಕ್ಷಕರಿಗೆ ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.

2021-22ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ಮಾತೆ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. 

ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ತಲಾ 10 ಸಾವಿರ ರೂ. ನಂತೆ ಒಟ್ಟು 3, 10,000 ನಗದು ಪುರಸ್ಕಾರ ಮತ್ತು ಪ್ರತಿ ಶಾಲೆಗೆ ರೂ. 50,000 ನಂತೆ ಒಟ್ಟು 15,50,000 ರೂ.ಗಳನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ವೆಚ್ಚ ಭರಿಸಿ, ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com