ಬೆಂಗಳೂರಿನ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ: ಕಮಲ್ ಪಂತ್

ಈ ಬಾರಿ ಕೇವಲ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ನಗರದ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು‌ ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್ ಅವರು ಶುಕ್ರವಾರ ಹೇಳಿದ್ದಾರೆ.
ಕಮಲ್ ಪಂತ್
ಕಮಲ್ ಪಂತ್
Updated on

ಬೆಂಗಳೂರು: ಈ ಬಾರಿ ಕೇವಲ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ನಗರದ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು‌ ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ‌ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ‌ ಪ್ರತಿಷ್ಠಾಪನೆಗೆ ಯಾವುದೇ ಅವಕಾಶ ನೀಡಿಲ್ಲ. ಪ್ರಸ್ತುತ ರಾಜ್ಯ‌ ಸರ್ಕಾರದ ನಿಯಮಗಳ ಅನುಸಾರ ಗಣೇಶ್ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ ಎಂದರು.

ಇನ್ನು, ಕಟ್ಟುನಿಟ್ಟಿನ ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿದ್ದು, ನಿಯಮಗಳು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು.

ಬಳಿಕ ಕೋರಮಂಗಲ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಪೊಲೀಸ್ ಆಯುಕ್ತರು, ಕೋರಮಂಗಲ ಅಪಘಾತ ಪ್ರಕರಣದ ತನಿಖೆ ನಡೆಯುತ್ತಿದೆ. ವೈಜ್ಞಾನಿಕವಾಗಿ ಈ ಕುರಿತು ತನಿಖೆ ನಡೆಸಲಾಗುತ್ತಿದೆ. 7 ಜನ ಒಂದೇ ಅಪಘಾತದಲ್ಲಿ ಸತ್ತಿದ್ದಾರೆ ಮುಂದೆ ಈ ರೀತಿ ಆಗಬಾರದು. ಹಾಗಾಗಿ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಮನೆಗೆ ಹೋಗಿ ಎಂದು ಅಪಘಾತದಲ್ಲಿ ಮೃತಪಟ್ಟವರಿಗೆ ಪೊಲೀಸರು ಸೂಚಿಸಿದ್ದರು. ಆಗ ಅವರು ಮನೆಗೆ ಹೋಗಿ ಬಂದಿದ್ದಾರಾ ಎನ್ನುವುದು ಗೊತ್ತಾಗುತ್ತಿಲ್ಲ. ಅವರ ಪಿಜಿ ಕೂಡ ಅಲ್ಲೇ ಇದ್ದಿದ್ದರಿಂದ ಓಡಾಡಿದ್ದಾರೆ. ಏಳು ಜನರ ಮರಣ ದುಖಃದ ಘಟನೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com