ಬೆಂಕಿ ಹಚ್ಚಿದ್ದ ಕಾರು
ರಾಜ್ಯ
ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಸಿಬಿ ತನಿಖೆಗೆ ವರ್ಗಾವಣೆ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಿ ಅದೇಶ ನೀಡಲಾಗಿದೆ.
ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಿ ಅದೇಶ ನೀಡಲಾಗಿದೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಕೇಸ್ ಸಿಸಿಬಿ ವರ್ಗಾವಣೆ ಮಾಡಿ ಆದೇಶ ನೀಡಿದ್ದು, ಸಿಸಿಬಿ ಡಿಸಿಪಿ ರವಿಕುಮಾರ್ ಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಆಗಸ್ಟ್ 12ರ ತಡರಾತ್ರಿ ಸತೀಶ್ ರೆಡ್ಡಿ ಮನೆಯ ಆವರಣಕ್ಕೆ ನುಗ್ಗಿದ್ದ ಮೂವರು ದುಷ್ಕರ್ಮಿಗಳ ತಂಡ, ಮನೆಯ ಬಳಿಯಿದ್ದ ಕಾರುಗಳಿಗೆ ಬೆಂಕಿಯಿಟ್ಟು ಎಸ್ಕೇಪ್ ಆಗಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬೊಮ್ಮನಹಳ್ಳಿ ಪೊಲೀಸರು, ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಎರಡು ದಿನದಲ್ಲಿ ಸಾಗರ್, ನವೀನ್, ಶ್ರೀಧರ್ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣ ವಿವಿಧ ಆಯಾಮ ಪಡೆಯುತ್ತಿರುವ ಕಾರಣ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

