ಕೊರೋನಾ 2ನೇ ಅಲೆಯಲ್ಲಿ ರಾಜ್ಯದಲ್ಲಿ 2ನೇ ಬಾರಿಗೆ ಸಾವಿರಕ್ಕಿಂತ ಕಡಿಮೆ ಸೋಂಕು; ಇಂದು 983; 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ!

ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. 
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
Updated on

ಬೆಂಗಳೂರು: ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. 

ಸೆ.04 ರಂದು 983 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2954047 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 21 ಮಂದಿ ಬಲಿಯಾಗಿದ್ದರೆ,  ಇದರೊಂದಿಗೆ ಸಾವಿನ ಸಂಖ್ಯೆ 37401ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 289 ಮಂದಿಗೆ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1239123 ಕ್ಕೆ ಏರಿಕೆಯಾಗಿದ್ದರೆ 7 ಮಂದಿ ನಗರದಲ್ಲಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ. 

ರಾಜ್ಯದಲ್ಲಿ ಇಂದು 1,620 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2898874ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳು 17746ಕ್ಕೆ ಇಳಿಕೆಯಾಗಿದೆ. 

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.61ಕ್ಕೆ ಇಳಿದಿದೆ.ಗದಗ, ಯಾದಗಿರಿ, ರಾಮನಗರ, ರಾಯಚೂರು, ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್-19 ಸೋಂಕು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com