ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!

1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ. 

ವೈರಸ್ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎರಡು ಡೋಸ್ ಲಸಿಕೆ ಪಡೆದುಕೊಂಡ ಬಳಿಕ ಬೂಸ್ಟರ್ ಡೋಸ್ ನೀಡಬೇಕೆಂದು ಕೆಲ ತಜ್ಞರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು, ಬೂಸ್ಟರ್ ಡೋಸ್ ಗಳ ಕುರಿತು ಸೂಕ್ತ ರೀತಿಯ ಅಧ್ಯಯನ ನಡೆಸದ ಹೊರತು ಅದನ್ನು ನೀಡಬಾರದು ಎಂದು ಹೇಳುತ್ತಿದ್ದಾರೆ. 

1800 ಮಂದಿಯ ಪೈಕಿ 900 ಮಂದಿ ಪೂರ್ಣ ಪ್ರಮಾಣದ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಸಮೀಕ್ಷೆಯ ವರದಿಯಲ್ಲಿ ಎರಡು ಡೋಸ್ ಪಡೆದುಕೊಂಡವರು ಹಾಗೂ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವುದು ಕಂಡು ಬಂದಿದೆ. ಈಗಾಗಲೇ ಸಮೀಕ್ಷಾ ವರದಿಯನ್ನು ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಸಮಿತಿಗೆ ಸಲ್ಲಿಸಲಾಗಿದ್ದು, ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. 

ಈ ನಡುವೆ ರೋಗ ನಿರೋಧಕ ಶಕ್ತಿ ಮಟ್ಟ ಹಾಗೂ ಮುಂದಿನ ಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳು ತಜ್ಞರು ಹಾಗೂ ವೈದ್ಯಕೀಯ ವೃತ್ತಿಪರರಿಗೆ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ರೋಗನಿರೋಧಕ ಶಕ್ತಿಯ ಪ್ರಮಾಣ ಮತ್ತು ಅದರ ಮಟ್ಟವನ್ನು ತಜ್ಞರು ನಿರ್ಧರಿಸುತ್ತಾರೆ. ನಗರದಲ್ಲಿ ಸೋಂಕು ಪ್ರಮಾಣ ಇಳಿಕೆಯಾಗುತ್ತಿಲ್ಲ. ಇದು ಚಿಂತೆಗೆ ಎಡೆ ಮಾಡಿಕೊಟ್ಟಿದೆ. ಪ್ರತೀನಿತ್ಯ ನಗರದಲ್ಲಿ 300-350 ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಲಸಿಕೆ ಜೊತೆಗೆ ಹೆಚ್ಚೆಚ್ಚು ವೈದ್ಯಕೀಯ ಚಿಕಿತ್ಸೆಗಳ ಅಗತ್ಯವೂ ಇದೆ ಎಂದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಡೋಸ್ ಲಸಿಕೆ ಹಾಗೂ ಬೂಸ್ಟರ್ ಗಳ ಅಗತ್ಯವಿದೆ. ಬೇರೆ ದೇಶಗಳಲ್ಲಿ ಮೂರನೇ ಡೋಸ್ ಲಸಿಕೆ ನೀಡಲಾಗುತ್ತಿದೆ. ಮಕ್ಕಳಿಗೂ ಲಸಿಕೆ ನೀಡುತ್ತಿದ್ದಾರೆ. ಆದರೆ, ನಮ್ಮ ರಾಷ್ಟ್ರದಲ್ಲಿ ಸಾಕಷ್ಟು ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕಾಗಿದೆ. ಈ ನಡುವೆ ಮತ್ತಷ್ಟು ಡೋಸ್ ಲಸಿಕೆಗಳ ಅಗತ್ಯವಿದೆಯೇ ಎಂಬುದರ ಕುರಿತಂತೆ ಚರ್ಚೆಗಳೂ ಆರಂಭವಾಗಿದ್ದು, ಇದು ನಿಜಕ್ಕೂ ಹಾಸ್ಯಸ್ಪದವಾಗಿದೆ ಎಂದು ಮತ್ತೊಬ್ಬರ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com