ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾದ ಬ್ಯಾಗ್
ರಾಜ್ಯ
ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ಪತ್ತೆ
ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ವೊಂದು ಭಾನುವಾರ ಪತ್ತೆಯಾಗಿದ್ದು, ಜನರು ಆತಂಕಗೊಂಡಿದ್ದರು.
ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಕೆಲಕಾಲ ಆತಂಕಕ್ಕೊಳಗಾಗಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.
ಮೆಟ್ರೊ ನಿಲ್ದಾಣದ ನಾರ್ತ್ ಗೇಟ್ನ ಮೆಟ್ಟಿಲುಗಳ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ತಕ್ಷಣವೇ ಮೆಟ್ರೊ ಸಿಬ್ಬಂದಿ ಬ್ಯಾಗ್ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಟ್ರಾಲಿ ಬ್ಯಾಗ್ ನಲ್ಲಿ ಬಟ್ಟೆ ಇರುವುದು ತಿಳಿದು ಬಂದಿದೆ. ಬೈಯಪ್ಪನಹಳ್ಳಿ ಪೊಲೀಸರು ಸಮೀಪದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ, ಮಹಿಳೆಯೊಬ್ಬರು ಸ್ಥಳದಲ್ಲೇ ಟ್ರಾಲಿ ಬ್ಯಾಗ್ ಬಿಟ್ಟು ಹೋಗಿರುವುದು ಗೊತ್ತಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ