ಕೋವಿಡ್ ಸೋಂಕಿಗೆ ವಿಜಯಪುರದಲ್ಲಿ ಮೊದಲ ಮಗು ಬಲಿ!

ಮಹಾಮಾರಿ ಕೊರೋನಾ ಸೋಂಕಿಗೆ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ 2 ವರ್ಷದ ಮಗುವೊಂದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ವಿಜಯಪುರ: ಮಹಾಮಾರಿ ಕೊರೋನಾ ಸೋಂಕಿಗೆ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ 2 ವರ್ಷದ ಮಗುವೊಂದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. 

ನಗರದ ಶಹ್ಪೇಟ್ ನಲ್ಲಿ 2 ವರ್ಷದ ಮಗು ಅತೀವ್ರ ಜ್ವರದಿಂದ ಕೆಲ ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕಳೆದ ವಾರ ಮೃತಪಟ್ಟಿತ್ತು ಎಂದು ವರದಿಗಳು ತಿಳಿಸಿವೆ. 

ಆಗಸ್ಟ್ 14 ರಂದು ಹೆಣ್ಣು ಮಗುವಿನಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸೂಕ್ತ ಪ್ರತಿಕ್ರಿಯೆ ಸಿಗದೆ ಆಗಸ್ಟ್ 24 ರಂದು ಮಗು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ವಿಜಯಪುರದಲ್ಲಿ ಈ ವರೆಗೆ ಸಾಕಷ್ಟು ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಆದರೆ, ಮಗುವೊಂದು ಸೋಂಕಿಗೆ ಬಲಿಯಾಗಿರುವುದು ಇದೇ ಮೊದಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com