ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧ ಬಲಿ

ನಗರದಲ್ಲಿ  ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ
Updated on: 

ಬೆಂಗಳೂರು: ನಗರದಲ್ಲಿ  ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಖುರ್ಷಿದ್ ಅಹ್ಮದ್ (60) ಮೃತ ವ್ಯಕ್ತಿಯಾಗಿದ್ದಾರೆ. ಜಯನಗರದ ನಿವಾಸಿಯಾಗಿರುವ ಖುರ್ಷಿದ್ ಅಹ್ಮದ್ ಅವರು ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಮೃತ ಖುರ್ಷಿದ್ ಅಂಗವಿಕಲರಾಗಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಕ್ತಿ ಮರಣೋತ್ತರ ಪರೀಕ್ಷೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಈ ನಡುವೆ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಸ್ತೆ ಗುಂಡಿ ಮುಚ್ಚುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ರಸ್ತೆ ಗುಂಡಿ ಮುಚ್ಚವಂತೆಯೂ ಸೂಚನೆ ನೀಡಲಾಗಿದೆ. ಮಳೆ ನಿಂತ ತಕ್ಷಣ ಯುದ್ಧೋಪಾದಿಯಲ್ಲಿ ಕೆಲಸ ಆರಂಭವಾಗುತ್ತೆ. ಗುಂಡಿ ಮುಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com