ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. 

ಈ ಕುರಿತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪಶುಪಾಲನೆ ಇಲಾಖೆ ಆದೇಶ ಹೊರಡಿಸಿದ್ದು, ಸೆ.10ರಂದು ಬಿಬಿಎಂಪಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ನಿಷೇಧಿಸಲಾಗಿದೆ. ಜೊತೆಗೆ, ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದೆ.

ರಾಜ್ಯದಲ್ಲಿ ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಮೂರು ದಿನಗಳ ಕಾಲ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com